ಕಬಿನಿ ಜಲಾಶಯದಿಂದ 36 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

By Kannadaprabha NewsFirst Published Jul 17, 2024, 10:44 AM IST
Highlights

ಕೇರಳದ ವಯನಾಡಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮಂಗಳವಾರ ಸಂಜೆ 29,945 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 36 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

 ಎಚ್‌.ಡಿ. ಕೋಟೆ :  ಕೇರಳದ ವಯನಾಡಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮಂಗಳವಾರ ಸಂಜೆ 29,945 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 36 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಜಲಾಶಯವು ಸಂಪೂರ್ಣ ಭರ್ತಿಯಾಗಿದ್ದು, ಕಬಿನಿ ಜಲಾಶಯದ ಗರಿಷ್ಟ ಮಟ್ಟ 2284 ಅಡಿಗಳಿದ್ದು, ಮಂಗಳವಾರ 2282.27 ಅಡಿ ತಲುಪಿದೆ. ಮಂಗಳವಾರ ಹೆಚ್ಚು ಒಳ ಹರಿವು ಬರುತ್ತಿರುವುದರಿಂದ ಜಲಾಶಯದ ಹಿತದೃಷ್ಟಿಯಿಂದ 36 ಸಾವಿರ ಕ್ಯುಸೆಕ್‌ ನೀರನ್ನು ಬಿಡಲಾಗುತ್ತಿದೆ.

Latest Videos

2 ವರ್ಷದಲ್ಲಿ ಮೊದಲ ಸಲ ತುಂಬಿದ ಕಬಿನಿ

ಎಚ್.ಡಿ.ಕೋಟೆ :  ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲೊಂದಾದ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯ ಶನಿವಾರ ಬಹುತೇಕ ಭರ್ತಿಯಾಗಿದೆ. 

ಕಳೆದ ವರ್ಷ ಮಳೆ ಕೊರತೆ ಹಿನ್ನೆಲೆಯಲ್ಲಿ ಈ ಡ್ಯಾಂ ಭರ್ತಿಯಾಗಿರಲಿಲ್ಲ. ಆದರೆ, ಈ ಬಾರಿ ಕೇರ ಳದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಹರಿವು ಚೆನ್ನಾಗಿದೆ. 

ಭಾರೀ ಮಳೆ: ಕರ್ನಾಟಕದ ಡ್ಯಾಂಗಳಲ್ಲಿ ಕಳೆದ ಸಲಕ್ಕಿಂತ ಈ ಬಾರಿ ಶೇ.25 ಹೆಚ್ಚು ನೀರು

2284 ಅಡಿ ಗರಿಷ್ಠಮಟ್ಟದ ಈ ಜಲಾಶಯದ ಮಟ್ಟ ಇದೀಗ 2283.30 ಅಡಿ ತಲುಪಿದ್ದು, 19,181 ಕ್ಯುಸೆಕ್‌ ನೀರು ಹರಿದು ಬರುತ್ತಿದೆ.  ಜಲಾಶಯದಿಂದ 20 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿದು ಬಿಡಲಾಗುತ್ತಿದೆ.

click me!