ಬೆಂಗಳೂರು: ಬುಲೆಟ್‌ ಬೈಕ್‌ ಡಿಕ್ಕಿ, ಸ್ಕೂಟರ್‌ ಸವಾರ ಸ್ಥಳದಲ್ಲೇ ದಾರುಣ ಸಾವು

Published : Sep 26, 2023, 06:41 AM IST
ಬೆಂಗಳೂರು: ಬುಲೆಟ್‌ ಬೈಕ್‌ ಡಿಕ್ಕಿ, ಸ್ಕೂಟರ್‌ ಸವಾರ ಸ್ಥಳದಲ್ಲೇ ದಾರುಣ ಸಾವು

ಸಾರಾಂಶ

ಮೃತ ಸವಾರ ಚಂದ್ರಪ್ಪ ಕೋರಮಂಗಲದ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ವೀರಸಾಗರದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಬೆಳಗ್ಗೆ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಬುಲೆಟ್‌ ದ್ವಿಚಕ್ರ ವಾಹನ ಚಂದ್ರಪ್ಪಗೆ ಡಿಕ್ಕಿ ಹೊಡೆದು ಚಕ್ರ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು(ಸೆ.26): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನ ಸವಾರನಿಗೆ ಬುಲೆಟ್‌ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ದೇಹದ ಮೇಲೆ ಚಕ್ರ ಉರುಳಿದ ಪರಿಣಾಮ ಆಕ್ಟೀವಾ ಸವಾರ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಚಂದ್ರಪ್ಪ ಮೇಟಿ (37) ಮೃತ ಸವಾರ. ಸೋಮವಾರ ಬೆಳಗ್ಗೆ 8.20ರ ಸುಮಾರಿಗೆ ವಿದ್ಯಾರಣ್ಯಪುರ ಮುಖ್ಯರಸ್ತೆಯ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ ಬಳಿ ಈ ಅಪಘಾತ ಸಂಭವಿಸಿದೆ.

ಮೃತ ಸವಾರ ಚಂದ್ರಪ್ಪ ಕೋರಮಂಗಲದ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ವೀರಸಾಗರದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಬೆಳಗ್ಗೆ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ಸಮಯಕ್ಕೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಬುಲೆಟ್‌ ದ್ವಿಚಕ್ರ ವಾಹನ ಚಂದ್ರಪ್ಪಗೆ ಡಿಕ್ಕಿ ಹೊಡೆದು ಚಕ್ರ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ

ಅಪಘಾತದ ಬಳಿಕ ಬುಲೆಟ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳ ಹಾಗೂ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಬುಲೆಟ್‌ ಸವಾರನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಯಲಹಂಕ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Read more Articles on
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ