4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್‌ ಅಲರ್ಟ್‌

Kannadaprabha News   | Asianet News
Published : Jul 16, 2021, 03:51 PM IST
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್‌ ಅಲರ್ಟ್‌

ಸಾರಾಂಶ

 ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜು.19ರ ವರೆಗೂ ವ್ಯಾಪಕ ಮಳೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು (ಜು.16): ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜು.19ರ ವರೆಗೂ ವ್ಯಾಪಕ ಮಳೆಯಾವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇನ್ನು ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಈ ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಅಂತೆಯೆ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಕಲಬುರಗಿ, ಬೀದರ್‌, ದಾವಣಗೆರೆ, ಚಾಮರಾಜನಗರ ಜಿಲ್ಲೆಯ ಕೆಲವು ಕಡೆ ಮುಂದಿನ ಎರಡು ದಿನ ಭಾರೀ ಮಳೆಯ ನಿರೀಕ್ಷೆಯಿದ್ದು, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ: ಗುಡ್ಡಕುಸಿತ

ಗುರುವಾರ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆಯಲ್ಲಿ 16 ಸೆಂ.ಮಿ, ತಾಳಗುಪ್ಪದಲ್ಲಿ 15 ಸೆಂ.ಮೀ., ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ತಲಾ 13 ಸೆಂ.ಮೀ., ಉತ್ತರ ಕನ್ನಡದ ಹೊನ್ನಾವರ, ದಕ್ಷಿಣ ಕನ್ನಡದ ಧರ್ಮಸ್ಥಳ, ಸುಬ್ರಹ್ಮಣ್ಯ,ಉಡುಪಿಯ ಕೊಲ್ಲೂರು, ಚಿಕ್ಕಮಗಳೂರಿನ ಜಯಪುರ ಹಾಗೂ ಹಾಸನದ ಸಕಲೇಶಪುರದಲ್ಲಿ ತಲಾ 12 ಸೆಂ.ಮೀ. ಮಳೆಯಾಗಿದೆ. ಶುಕ್ರವಾರ ಕರಾವಳಿ ಪ್ರದೇಶದಲ್ಲಿ ಗಾಳಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಇನ್ನು ಎರಡು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

PREV
click me!

Recommended Stories

ರಾಮನಗರದ ರೇವಣಸಿದ್ದೇಶ್ವರ ಬೆಟ್ಟದಲ್ಲಿ ದುರಂತ: ದೇವರ ದರ್ಶನಕ್ಕೂ ಮುನ್ನವೇ ಕಂದಕ ಸೇರಿದ ಭಕ್ತ!
Bengaluru: ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕನ ಬಂಧನ