Karnataka Highway : ಚಿಕ್ಕಮಗಳೂರು-ಬೇಲೂರು ನಡುವೆ ಚತುಷ್ಫಥ ರಸ್ತೆ

By Kannadaprabha News  |  First Published Dec 28, 2021, 1:15 PM IST
  •  ಚಿಕ್ಕಮಗಳೂರು-ಬೇಲೂರು ಚತುಷ್ಫಥ ರಸ್ತೆ
  •  ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿಖಾ ಸೂಚನೆ
  • ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ನೀಲನಕ್ಷೆ ತಯಾರಿಸಿ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸಿ
     

 ಚಿಕ್ಕಮಗಳೂರು(ಡಿ.28):  ಚಿಕ್ಕಮಗಳೂರು - ಬೇಲೂರು (Chikkamagaluru - Beluru) ನಡುವೆ ಈಗಿನ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ (Road) ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರಕ್ಕೆ (Karnataka Govt)  ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಮತ್ತು ಚಿಕ್ಕಮಗಳೂರು (Chikkamagaluru)  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ. ಶಿಖಾ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯನ್ನು ಇನ್ನಷ್ಟುಉತ್ತೇಜಿಸಲು ಮತ್ತು ಭವಿಷ್ಯದ ಸಂಚಾರ ದೃಷ್ಟಿಯಿಂದ ಚಿಕ್ಕಮಗಳೂರು-ಬೇಲೂರು ರಸ್ತೆ (Road) ಮೇಲ್ದರ್ಜೆಗೇರಿಸುವುದು ಅಗತ್ಯವಾಗಿದೆ. ಆದುದರಿಂದ ಸರ್ಕಾರಕ್ಕೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಈಗಿರುವ ಹೆಲಿಪ್ಯಾಡನ್ನು (Helipad) ಹೆಲಿಪೋರ್ಟ್‌ ಆಗಿ ಪರಿವರ್ತಿಸಿದರೆ, ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚು ಬಲ ಬರಲಿದೆ. ಈ ನಿಟ್ಟಿನಲ್ಲಿ ಈ ಬಗ್ಗೆ ವಿವರವಾದ ಯೋಜನಾ ವರದಿ ತಯಾರಿಸಿ ಸಲ್ಲಿಸುವಂತೆ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

Tap to resize

Latest Videos

ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ನೀಲ ನಕ್ಷೆಯನ್ನು (Blue Print) ತಯಾರಿಸಿ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದರು. ಅಲ್ಲದೇ ಅತಿ ವೃಷ್ಟಿಯಿಂದ ಮನೆ ಹಾನಿಯಾದವರಿಗೆ ಪರಿಹಾರ ತರಣೆ ಸಂಬಂಧ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಬೇಕು. ವಿಪತ್ತು ನಿರ್ವಹಣೆಗೆ ಅನುದಾನದ ಕೊರತೆಯಾಗದಂತೆ ಗಮನಹರಿಸಬೇಕು ಎಂದು ತಿಳಿಸಿದ ಅವರು, ಸಾರ್ವಜನಿಕ ಕುಂದು ಕೊರತೆಗಳನ್ನು ಪರಿಹರಿಸಲು ಆದ್ಯತೆ ನೀಡಬೇಕು. ಕೋವಿಡ್‌ (Covid ) ಲಸಿಕಾ ಕರಣದಲ್ಲಿ (Vaccination) ಎರಡನೇ ಡೋಸ್‌ ನೀಡಿಕೆ ಕಾರ್ಯವನ್ನು ತ್ವರಿತಗೊಳಿಸಲು ಅವರು ಆರೋಗ್ಯ ಇಲಾಖೆ (Health Department) ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಮಾತನಾಡಿ, ಜಿಲ್ಲೆಯಲ್ಲಿ ಸಾಂಬಾರು ಬೆಳೆಗಳ ಪಾರ್ಕ್(ಸ್ಪೈಸ್‌ ಪಾರ್ಕ್) ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಜಾಗವನ್ನು ಕೆಐಎಡಿಬಿಗೆ ಹಸ್ತಾಂತರಿಸಲಾಗಿದೆ. ಈ ಕಾಮಗಾರಿ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡಲು ಈಗಾಗಲೇ ಸಾಂಬಾರು ಮಂಡಳಿಗೆ ಪತ್ರ ಬರೆಯಲಾಗಿದೆ. ಮಂಡಳಿಯಿಂದ ಪೂರಕವಾದ ಸ್ಪಂದನೆ ದೊರಕಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮದಲ್ಲಿ (Tourism) ಉದ್ಯೋಗಾವಕಾಶಗಳನ್ನು (Job) ಹೆಚ್ಚಿಸಲು ಜಿಲ್ಲೆಯ ರೆಸಾರ್ಟ್‌ (Resort) ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, ಈ ಕ್ಷೇತ್ರದಲ್ಲಿ ವೃತ್ತಿ ನೈಪುಣ್ಯ ವುಳ್ಳವರನ್ನು ಸೃಷ್ಟಿಸಲು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಮುಂದೆ ಬಂದಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯಲ್ಲಿ ಜಲಜೀವನ್‌ ಮಿಶನ್‌ ಯೋಜನೆಯಡಿ 251 ಕಾಮಗಾರಿಗಳು ಪ್ರಾರಂಭವಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಪ್ರತೀ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.  ಜಿಲ್ಲೆಯಲ್ಲಿ ವಸತಿ ಯೋಜನೆಯಡಿ ನಿವೇಶನ ಗುರುತಿಸಿ, ಮನೆ ನಿರ್ಮಿಸಲು ಸ್ಪಷ್ಟವಾದ ಯೋಜನೆ ರೂಪಿಸಲಾಗಿದೆ. ಜಮೀನು ಮಂಜೂರಾತಿಗೆ ಕಂದಾಯ ಇಲಾಖೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಪೊಲೀಸ್‌ (Police) ವರಿಷ್ಠಾಧಿಕಾರಿ ಅಕ್ಷಯ್‌, ಅಪರ ಜಿಲ್ಲಾಧಿಕಾರಿ ಬಿ.ಆರ್‌. ರೂಪಾ, ಉಪ ವಿಭಾಗಾಧಿಕಾರಿ ಡಾ.ಎಚ್‌.ಎಲ್‌. ನಾಗರಾಜ್‌ ಇದ್ದರು.

ಚಾರ್ಮಾಡಿ ಘಾಟ್‌ನಲ್ಲೂ ಚತುಷ್ಪತ ರಸ್ತೆ :  ಚಾರ್ಮಾಡಿ ಘಾಟ್‌ (charmadi Ghat) ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗಿದೆ. ಅರಣ್ಯ ಇಲಾಖೆಯೊಂದಿಗೆ (Forest Department) ಚರ್ಚೆ ನಡೆಸಿ ರಾಷ್ಟ್ರೀಯ ಹೆದ್ದಾರಿಯಾಗಿ (National Highway) ಪರಿವರ್ತಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದರು. ಕೊಟ್ಟಿಗೆ ಹಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಮಾಡಿ ಘಾಟಿ (Charmadi Ghat) ಪ್ರತಿವರ್ಷ ಮಳೆಗಾಲದಲ್ಲಿ (Monsoon) ಮಳೆಗೆ ಮಣ್ಣು ಕುಸಿಯುವುದು ಹಾಗೂ ಗುಡ್ಡ ಕುಸಿಯುವುದರಿಂದ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಚಾರ್ಮಾಡಿ ಚತುಷ್ಪತಾ ರಸ್ತೆಯನ್ನಾಗಿ ಮಾಡಲು ಅಪೇಕ್ಷೆ ಇದೆ. ಇದಕ್ಕೆ ಅರಣ್ಯ ಇಲಾಖೆ ಆಕ್ಷೇಪಣೆಯೂ ಸದ್ಯದಲ್ಲೇ ಬರಬಹುದು ಎಂದರು.

 ಅರಣ್ಯ ಇಲಾಖೆ (Forest Department) ಜೊತೆ ಮಾತುಕತೆ ನಡೆಸಿ ಸಮಸ್ಯೆ ನಿವಾರಿಸಿ ಚಾರ್ಮಾಡಿ ರಸ್ತೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ (National Highway) ಮಾರ್ಪಡಿಸಿ ಚತುಷ್ಪತಾ ರಸ್ತೆ ಮಾಡಲು ಪ್ರಯತ್ನ ನಡೆದಿದೆ. ಮೂಲಭೂತ ಸೌಲಭ್ಯಕ್ಕೆ ಯಾವುದೇ ಅರಣ್ಯದ (Forest) ಕಾಯ್ದೆ ಅಡಚಣೆಯಾಗದಂತೆ ಸಡಿಲಗೊಳಿಸಲು ಕೇಂದ್ರ ಪರಿಸರ ಮಂತ್ರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಈಗಾಗಲೇ ಕೊಟ್ಟಿಗೆಹಾರದಿಂದ ಮೂಡಿಗೆರೆ ಬೇಲೂರು (Beluru) ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು ಶೀಘ್ರದಲ್ಲಿ ಸಂಚಾರಕ್ಕೆ ಮುಕ್ತ ಗೊಳಿಸಲಾಗುತ್ತದೆ ಎಂದರು ಶೋಭಾ

ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದೆ. ಅದರಲ್ಲಿರುವ ಎಲ್ಲಾ ಕಾನೂನುಗಳನ್ನು (Law) ಬಲವಾಗಿ ಜಾರಿಗೊಳಿಸಲು ನಮ್ಮ ಅಪೇಕ್ಷೆ ಇದೆ. ಕಾಂಗ್ರೆಸ್‌ (Congress) ಇದನ್ನು ವಿರೋಧಿಸುತ್ತಿದೆ. ಬೇರೆ ಧರ್ಮದವರನ್ನು ಮತಕ್ಕಾಗಿ ಓಲೈಕೆ ಮಾಡಿಕೊಂಡು ತಮ್ಮ ಬೇಳೆಯನ್ನು ಬೇಯಿಸಿಕೊಂಡು ಕುರ್ಚಿ ಗಟ್ಟಿ ಮಾಡುವ ಕೆಲಸ ಕಾಂಗ್ರೆಸ್‌ (Congress) ಮಾಡುತ್ತಿದೆ ಎಂದರು.

click me!