ಸುವರ್ಣಸೌಧದಲ್ಲಿ ಡಿ.19ರಿಂದ 30ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರ ಹಾಜರಾತಿ ಕಡ್ಡಾಯ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಬೆಳಗಾವಿ (ಡಿ.13) : ಸುವರ್ಣಸೌಧದಲ್ಲಿ ಡಿ.19ರಿಂದ 30ರವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರ ಹಾಜರಾತಿ ಕಡ್ಡಾಯ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಸೋಮವಾರ ಅಧಿವೇಶನದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅನಿವಾರ್ಯ ಸಂದರ್ಭಗಳಲ್ಲಿ ತಮ್ಮ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ಶಾಸಕರು ವಿನಾಯಿತಿ ಪಡೆಯಬಹುದು. ಮೊದಲ ದಿನ ವಿಧಾನಸಭೆಯ ಉಪಾಧ್ಯಕ್ಷ ದಿ.ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ. ಇದಲ್ಲದೇ ನಾಲ್ಕು ಹೊಸ ವಿಧೇಯಕಗಳು ಮಂಡನೆಯಾಗಲಿವೆ. ಜೊತೆಗೆ, ಬೇರೆ ಯಾವುದಾದರೂ ವಿಧೇಯಕ ಇದ್ದರೆ, ಸರ್ಕಾರ ಅವುಗಳನ್ನು ಮಂಡಿಸಲಿದೆ. ಸಮಗ್ರ ಕರ್ನಾಟಕದ ಜತೆಗೆ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದರು.
undefined
Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?
‘ನಾನು ವಿಧಾನಸಭೆಯ ಅಧ್ಯಕ್ಷನಾದ ಬಳಿಕ ಅತ್ಯುತ್ತಮ ಶಾಸಕರನ್ನು ಆಯ್ಕೆ ಮಾಡಿ, ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿದ್ದೇನೆ. ಬೆಳಗಾವಿ ಅಧಿವೇಶನದಲ್ಲಿಯೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು. ಆಯ್ಕೆ ಸಮಿತಿ ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು’ ಎಂದು ಹೇಳಿದರು.
ಬೆಳಗಾವಿಯಲ್ಲಿ ಹತ್ತನೇ ಅಧಿವೇಶನ ನಡೆಯುತ್ತಿದೆ. ಏಳು ಅಧಿವೇಶನ ಸುವರ್ಣಸೌಧದಲ್ಲಿ ನಡೆದಿದ್ದು, ಹೊರಗಡೆ ಎರಡು ಅಧಿವೇಶನವನ್ನು ನಡೆಸಲಾಗಿದೆ. ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ. ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು.ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ, ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ಮಾಡಿಕೊಡಲಾಗುವುದು ಎಂದರು.
ಬೆಳಗಾವಿ ಅಧಿವೇಶನ ವೇಳೆ ಅನುದಾನರಹಿತ ಶಿಕ್ಷಕರ ಉಪವಾಸ ಸತ್ಯಾಗ್ರಹ