
ಬೆಂಗಳೂರು(ಜೂ.29): ನಗರದಲ್ಲಿ ಟ್ರಾಫಿಕ್ ಕಿರಿಕಿರಿ ಕಡಿಮೆ ಮಾಡುವ ಉದ್ದೇಶದಿಂದ ಇನ್ನೂ ನಾಲ್ಕು ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ .404 ಕೋಟಿ ಅನುದಾನ ನೀಡುವುದಾಗಿ ತಿಳಿಸಿದೆ.
ನಗರದಲ್ಲಿ 45 ಮೇಲ್ಸೇತುವೆಗಳಿದ್ದು, ಇದೀಗ ಇಟ್ಟಮಡು ಜಂಕ್ಷನ್, ಸಾರಕ್ಕಿ ಜಂಕ್ಷನ್, ಜೆಸಿ ರಸ್ತೆ ಹಾಗೂ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಬಸವೇಶ್ವರ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ ಸಲ್ಲಿಸಿದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯಡಿ .404.14 ಕೋಟಿ ನೀಡಲಿದೆ. ಬಿಬಿಎಂಪಿ ಯೋಜನಾ ವಿಭಾಗದಿಂದ ಮೇಲ್ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿಕೊಂಡು ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಸರ್ಕಾರ ಸೂಚಿಸಿದೆ.
Bengaluru: ಪೀಣ್ಯ ಮೇಲ್ಸೇತುವೆ ಮೇಲೆ ಬಸ್, ಲಾರಿ ಓಡಾಟ?
ಜೆಸಿ ರಸ್ತೆಯ ಫ್ಲೈಓವರ್ ವಿನ್ಯಾಸ ಬದಲು
ಜೆ.ಸಿ.ರಸ್ತೆಯಲ್ಲಿ ಈ ಹಿಂದೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವುದಕ್ಕೆ ತೀರ್ಮಾನಿಸಲಾಗಿತ್ತು. ಆದರೆ, ಈ ಬಗ್ಗೆ ಸಾಕಷ್ಟುಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ವಿನ್ಯಾಸ ಬದಲಾವಣೆ ಮಾಡಿ ಮೇಲ್ಸೇತುವೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲಿ ಈ ಬಗ್ಗೆ ವಿಸ್ತೃತ ಡಿಪಿಆರ್ ಸಿದ್ಧಪಡಿಸಲಾಗುವುದು ಎಂದು ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ತಿಳಿಸಿದ್ದಾರೆ.
ಯಾವ ಮೇಲ್ಸೇತುವೆಗೆ ಎಷ್ಟು ವೆಚ್ಚ? ಮೇಲ್ಸೇತುವೆ ವೆಚ್ಚ(ಕೋಟಿ)
ಇಟ್ಟಮಡು ಜಂಕ್ಷನ್‌ನಿಂದ ಕಾಮಾಕ್ಯ ಜಂಕ್ಷನ್ 40.50
ಬಸವೇಶ್ವರ ನಗರದಿಂದ ವೆಸ್ಟ್ ಆಫ್ ಕಾರ್ಡ್ ರಸ್ತೆ 30.64
ಹಡ್ಸನ್ ಸರ್ಕಲ್-ಮಿನರ್ವ ಸರ್ಕಲ್ ಮಾರ್ಗ(ಜೆಸಿ ರಸ್ತೆ) 20.64
ಕನಕಪುರ ರಸ್ತೆಯಿಂದ ಸಾರಕ್ಕಿ ಜಂಕ್ಷನ್ 130
ಒಟ್ಟು 404.14