ಉರುಳಿ ಬಿದ್ದ 30ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್

Published : Dec 24, 2019, 11:00 AM IST
ಉರುಳಿ ಬಿದ್ದ 30ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್

ಸಾರಾಂಶ

ಶಾಲಾ ಬಸ್ ಒಂದು ಉರುಳಿ ಬಿದ್ದು ಹಲವು ಮಕ್ಕಳು ಗಾಯಗೊಂಡ ಘಟನೆ ಹಾಸನದಲ್ಲಿ ನಡೆದಿದೆ. 

ಹಾಸನ (ಡಿ.24) : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ ಉರುಳಿ ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ. 

ಹಾಸನ ಹೊರಬಲಯದ ಸಂಕೇನಹಳ್ಳಿ ಬಳಿ ಘಟನೆ ನಡೆದಿದ್ದು, ಈ ವೇಳೆ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. 

ಬಸ್ಸಿನಲ್ಲಿ 30ಕ್ಕೂ ಹೆಚ್ಚು ಮಕ್ಕಳಿದ್ದು,  ಮುಂಜಾನೆ ಶಾಲೆಗೆ ಮಕ್ಕಳನ್ನು ಕರೆದೊಯ್ಯುವಾಗ ಈ ದುರ್ಘಟನೆ ನಡೆದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಚಿರಂತನ ಶಾಲೆಗೆ ಸೇರಿದ ಬಸ್ ಇದಾಗಿದ್ದು ರಸ್ತೆಯಿಂದ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಇನ್ನು ಗಾಯಾಳು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
click me!

Recommended Stories

ರೇಷ್ಮೆಗೂಡಿಗೆ ಬಂಪರ್ ಬೆಲೆ: ಕೆಜಿಗೆ 1100 ರು. ಹೊಸ ದಾಖಲೆ; ಬೆಲೆ ಏರಿಕೆಗೆ ಕಾರಣ ಏನು?
Mysuru: 140 ವರ್ಷಗಳ ಇತಿಹಾಸವುಳ್ಳ ಮೈಸೂರು ಚಿಕ್ಕಗಡಿಯಾರ ನವೀಕರಣ ಮಾಡಲಿದೆ ಎಚ್‌ಎಂಟಿ