ಹುಣಸೂರು ಉಪಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ 40 ರಷ್ಟು FIR ದಾಖಲಾಗಿದೆ. ಹುಣಸೂರು ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿದ್ದು ಈಗಾಗಲೇ ಚುನಾವಣಾ ಸಂಬಂಧಿ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ ನಾಲ್ಕು ತುಕಡಿಗಳನ್ನು ಹುಣಸೂರಿನಲ್ಲಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಾಹಿತಿ ನೀಡಿದ್ದಾರೆ.
ಮೈಸೂರು(26): ಹುಣಸೂರು ಉಪಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ 40 ರಷ್ಟು FIR ದಾಖಲಾಗಿದೆ. ಹುಣಸೂರು ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿದ್ದು ಈಗಾಗಲೇ ಚುನಾವಣಾ ಸಂಬಂಧಿ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ನಾಲ್ಕು ತುಕಡಿಗಳನ್ನು ಹುಣಸೂರಿನಲ್ಲಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಾಹಿತಿ ನೀಡಿದ್ದಾರೆ. ಹುಣಸೂರು ಉಪಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಎಲ್ಲ 274 ಮತಗಟ್ಟೆಗಳಿಗೆ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಮಾಡಲಾಗಿದೆ.
ಶ್ರೀರಾಮುಲು ಭೇಟಿ ಬಳಿಕ ಜಿಟಿಡಿ ರಿಯಾಕ್ಷನ್: ಸಂಚಲನ ಮೂಡಿಸಿದ ಗೌಡ್ರ ಮಗ ಹರೀಶ್ ಮಾತು
ತಲಾ 329 ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್ ಹಾಗೂ 357 ವಿವಿಪ್ಯಾಟ್ ಯಂತ್ರಗಳು ಸಿದ್ಧವಾಗಿದ್ದು, ನಗರಸಭೆ ಕಾರ್ಯಾಲಯ ಕಟ್ಟಡದ ಕೊಠಡಿಯಲ್ಲಿ ಪೊಲೀಸ್ ಭದ್ರತೆ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಲ್ಲ ಸಿದ್ಧತೆ ನಡೆಸಲಾಗಿದೆ.
ಮಸ್ಟರಿಂಗ್, ಡಿ ಮಸ್ಟರಿಂಗ್ ಪ್ರಕ್ರಿಯೆ ಮತ್ತು ಮತ ಎಣಿಕೆಯನ್ನು ಹುಣಸೂರಿನ ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ನಿರ್ಧರಿಸಿದ್ದು, ಮನುಗನಹಳ್ಳಿ, ವೀರನಹೊಸಹಳ್ಳಿ (ಉಮ್ಮತ್ತೂರು), ಚಿಲ್ಕುಂದ, ಗಾವಡಗೆರೆ (ಚಿಕ್ಕಾಡನಹಳ್ಳಿ) ಮುತ್ತುರಾಯನಹೊಸಹಳ್ಳಿ ಮತ್ತು ದೊಡ್ಡೇಕೊಪ್ಪಲುವಿನಲ್ಲಿ ಚೆಕ್‍ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ.
ರಂಗೇರಿದ ಹುಣಸೂರು ಬೈ ಎಲೆಕ್ಷನ್: ಹೇಳಿದಂತೆ ಜಿಟಿಡಿ ಮನೆಗೆ ಶ್ರೀರಾಮುಲು
ಚುನಾವಣೆ ದಿನಾಂಕ ನಿಗದಿಯಾದ ನಂತರದಲ್ಲಿ 1.37 ಕೋಟಿ ಮೌಲ್ಯದ 1 ಲಕ್ಷ ಲೀ. ಮದ್ಯ ವಶಪಡಿಸಲಾಗಿದ್ದು, 97.90 ಲಕ್ಷ ಮೌಲ್ಯದ ಸೀರೆ, ಪಾತ್ರೆ, ವಾಹನಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣೆ ಸಂಬಂಧ ವಿಶೇಷವಾಗಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ರೌಡಿಗಳನ್ನು ಮತ್ತು ಈ ಹಿಂದೆ ಚುನಾವಣೆ ಸಮಯದಲ್ಲಿ ಕಾನೂನು ಉಲ್ಲಂಘಿಸಿದವರನ್ನು ಕರೆಸಿ ಎಚ್ಚರಿಕೆ ನೀಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು 40 ಎಫ್‌ಐಆರ್ ದಾಖಲಾಗಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಡೆ ಪಥಸಂಚಲನ ನಡೆಸಿದೆ.
ರಂಗಾಯಣ ನಿರ್ದೇಶಕರ ಹುದ್ದೆಗೆ 60ಕ್ಕೂ ಹೆಚ್ಚು ಅರ್ಜಿ!