ದುರ್ಗಾಪರಮೇಶ್ವರಿ ದೇಗುಲದಲ್ಲಿ ನಡೆದ 47 ಜೋಡಿಗಳ ವಿವಾಹ

Kannadaprabha News   | Asianet News
Published : Apr 25, 2021, 02:18 PM IST
ದುರ್ಗಾಪರಮೇಶ್ವರಿ ದೇಗುಲದಲ್ಲಿ ನಡೆದ 47 ಜೋಡಿಗಳ ವಿವಾಹ

ಸಾರಾಂಶ

ಕಟೀಲು ದುರ್ಗಾಪರಮೇಶ್ವರಿ ದೇವಾಲಯದಲ್ಲಿ 47 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋವಿಡ್ ನಿಯಮಾವಳಿಗಳಿಗೆ ಅನುಸಾರವಾಗಿ ವಿವಾಹ ಸಮಾರಂಭ ನಡೆದಿದೆ. 

ಮಂಗಳೂರು (ಏ.25): ಕರೊನಾ ನಿಯಂತ್ರಣಕ್ಕೆ‌ ಕಟ್ಟುನಿಟ್ಟಿನ ಕ್ರಮ ಜಾರಿ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸರಳ ವಿವಾಹ ಸಮಾರಂಭ ನಡೆದಿದೆ. 

ದಕ್ಷಿಣಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿಂದು  47 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಕೋವಿಡ್ ನಿಯಮ ಪಾಲಿಸಿಕೊಂಡು ವಿವಾಹಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಂದು ಮದುವೆಗೆ ಅರ್ಚಕರು, ಫೊಟೋಗ್ರಾಫರ್ ಸೇರಿ 10 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. 

50ರ ಮಿತಿಯಿಲ್ಲದೇ ಮದುವೇಲಿ ಭಾಗವಹಿಸಲು ಐಡಿಯಾ : ನೀವು ಮಾಡ್ಬಹುದು

ದೇವಳದ ಸರಸ್ವತಿ ಸದನ, ಮಹಾಲಕ್ಷ್ಮಿ ಸದನ,ಅನ್ನಚತ್ರದಲ್ಲಿ  ಮದುವೆ ನಡೆಸಲಾಗಿದೆ. ದೇವಸ್ಥಾನದ ಹೊರಭಾಗದಿಂದಲೇ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಮೊದಲೇ ಬುಕ್ಕಿಂಗ್ ಆಗಿದ್ದ 90 ಜೋಡಿಗಳಲ್ಲಿ 47 ಜೋಡಿಗಳ ಮದುವೆ ಕಾರ್ಯಕ್ರಮ ನೆರವೇರಿದೆ. 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ