Latest Videos

ಕೊಡಗು ಜಿಲ್ಲೆಯ ಆಸ್ಪತ್ರೆಗಳ ಅಭಿವೃದ್ಧಿಗೆ 5 ಕೋಟಿ ರೂ ಬಿಡುಗಡೆ: ಸಚಿವ ದಿನೇಶ್ ಗುಂಡೂರಾವ್

By Govindaraj SFirst Published Jun 24, 2024, 7:33 PM IST
Highlights

ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಆಸ್ಪತ್ರೆಗೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ತಲಾ 1.75 ಕೋಟಿ ರೂ. ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ 2 ಕೋಟಿ ರೂಪಾಯಿ ಸೇರಿ ಒಟ್ಟು 5 ಕೋಟಿ ರೂಪಾಯಿಯನ್ನು ಆಸ್ಪತ್ರೆಗಳ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. 

ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು (ಜೂ.24): ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಆಸ್ಪತ್ರೆಗೆ ಮತ್ತು ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಗೆ ತಲಾ 1.75 ಕೋಟಿ ರೂ. ಮತ್ತು ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಗೆ 2 ಕೋಟಿ ರೂಪಾಯಿ ಸೇರಿ ಒಟ್ಟು 5 ಕೋಟಿ ರೂಪಾಯಿಯನ್ನು ಆಸ್ಪತ್ರೆಗಳ ಅಭಿವೃದ್ಧಿಗೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಡಯಾಲಿಸಿಸ್ ಘಟಕ’ವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳನ್ನು ಆರಂಭಿಸಿ ಸುಮಾರು 800 ಯಂತ್ರಗಳನ್ನು ಅಳವಡಿಸಲಾಗಿದೆ. 

ಹೊಸ ತಾಲ್ಲೂಕು ಕೇಂದ್ರಗಳಲ್ಲಿಯೂ ಸಹ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೊಸ ಹೊಸ ಪ್ರಯೋಗಗಳನ್ನು ಮಾಡಿ ಸುಲಭವಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ ಎಂದು ದಿನೇಶ್ ಗುಂಡುರಾವ್ ಹೇಳಿದರು. ಈಗಾಗಲೇ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 3 ಡಯಾಲಿಸಸ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದು ಅಳವಡಿಸಬಹುದಾಗಿದೆ. ‘ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಸಕ್ತ ಬಜೆಟ್‍ನಲ್ಲಿ ಸೇರ್ಪಡೆ ಮಾಡಲು ಪ್ರಯತ್ನಿಸಲಾಗುವುದು ಎಂದರು. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ವೈದ್ಯರು, ಸಿಬ್ಬಂದಿಗಳನ್ನು ನಿಯೋಜಿಸಲು ಹಂತ ಹಂತವಾಗಿ ಕ್ರಮವಹಿಸಲಾಗುವುದು. 

ಬ್ಯಾಕ್ ಟು ಬ್ಯಾಕೋ ಇಲ್ಲ ಫ್ರಂಟ್ ಟು ಫ್ರಂಟೋ ನಮಗೇನು ಗೊತ್ತು: ಸೂರಜ್ ಬಗ್ಗೆ ಸಚಿವ ದಿನೇಶ್ ಹೇಳಿದಿಷ್ಟು..

ಗುತ್ತಿಗೆ ಆಧಾರದಲ್ಲಿಯೂ ಸಹ ನೇಮಕ ಮಾಡಿಕೊಳ್ಳಲು ಮುಂದಾಗಲಾಗುವುದು ಎಂದರು. ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಒದಗಿಸಬೇಕು. ಆ ನಿಟ್ಟಿನಲ್ಲಿ ಔಷಧಿಗಳು ಸೇರಿದಂತೆ ಶೇ.100 ರಷ್ಟು ಔಷಧಿಗಳು ದೊರೆಯುವಂತಾಗಲು ಪ್ರಯತ್ನಿಸಲಾಗಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಶೇ.100 ರಷ್ಟು ಗುರಿ ತಲುಪಲಾಗುವುದು ಎಂದು ದಿನೇಶ್ ಗುಂಡುರಾವ್ ಅವರು ಹೇಳಿದರು. ಇರುವ ವೈದ್ಯರು ಮತ್ತು ಸಿಬ್ಬಂದಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ರೋಗಿಗಳಿಗೆ ಉಪಚರಿಸುವುದು, ಅಗತ್ಯ ಆರೋಗ್ಯ ಸೇವೆ ಕಲ್ಪಿಸುವುದು ಅತೀ ಮುಖ್ಯವಾಗಿದೆ ಎಂದು ದಿನೇಶ್ ಗುಂಡುರಾವ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. 

ವೈದ್ಯರು ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು. ಕಳೆದ ಐದು ಆರು ವರ್ಷಗಳಿಂದ ಯಾವುದೇ ಹುದ್ದೆಗಳು ನೇಮಕಾತಿ ನಡೆದಿಲ್ಲ. ಆದ್ದರಿಂದ ವೈದ್ಯರು, ಶ್ರುಶ್ರೂಷಕರು ಮತ್ತು ತಂತ್ರಜ್ಞರ ನೇಮಕಾತಿ ಮಾಡಲಾಗುವುದು ಎಂದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ರಕ್ತದೊತ್ತಡ ಹಾಗೂ ಮಧುಮೇಹ ಮತ್ತಿತರ ರೋಗಗಳಿಗೆ ಡಯಾಲಿಸಿಸ್ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಘಟಕ ಆರಂಭಿಸುವ ಮೂಲಕ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು. 

ರಕ್ತದೊತ್ತಡ, ಮಧುಮೇಹದಿಂದ ಹಲವು ರೋಗಗಳಿಗೆ ಸಿಲುಕಬೇಕಾಗುತ್ತದೆ. ಆದ್ದರಿಂದ ರೋಗಗಳನ್ನು ತಡೆಯಲು  ಡಯಾಲಿಸಿಸ್ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಎಲ್ಲೆಡೆ ಆರೋಗ್ಯ ಸೇವೆ ಕಲ್ಪಿಸಲು ಡಯಾಲಿಸಿಸ್ ಘಟಕವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿಯೂ ಆರಂಭಿಸುವಂತಾಗಬೇಕು ಎಂದು ಶಾಸಕರು ಮನವಿ ಮಾಡಿದರು. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದೆ. ಕೊಡಗು ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಹೆಚ್ಚಿನ ವೇತನ ನೀಡುವಂತಾಗಬೇಕು ಎಂದು ಡಾ.ಮಂತರ್ ಗೌಡ ಸಚಿವರ ಬಳಿ ಕೋರಿದರು. 

Breaking: ಮಾರುಕಟ್ಟೆಯಿಂದ ಬ್ಯಾನ್ ಆಗುತ್ತಾ ಕೆಂಪು ಕೆಂಪು ಕಬಾಬ್? ನಾನ್‌ವೆಜ್‌ ಪ್ರಿಯರಿಗೆ ಬಿಗ್ ಶಾಕ್

ಕೂಡಿಗೆ ಕೈಗಾರಿಕಾ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಹೆಸರು ಇಡಲು ಚಿಂತಿಸಲಾಗಿದ್ದು, ಗುಂಡುರಾವ್ ಅವರ ಹೆಸರು ಕುಶಾಲನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶಾಶ್ವತವಾಗಿ ಉಳಿಯಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದರು. ಹೆಬ್ಬಾಲೆ ಮತ್ತು ಸುಂಟಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಅವಕಾಶ ಮಾಡುವಂತೆ ಆರೋಗ್ಯ ಸಚಿವರಲ್ಲಿ ಶಾಸಕರು ಕೋರಿದರು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ತಜ್ಞವೈದ್ಯರು ಕೆಲಸ ನಿರ್ವಹಿಸಲು ಆಸಕ್ತಿ ತೋರಬೇಕು ಎಂದು ಹೇಳಿದರು.

click me!