ಕೊರೋನಾ : 5 ದಿನ ತರಗತಿಗಳು ಬಂದ್

Kannadaprabha News   | Asianet News
Published : Mar 25, 2021, 07:33 AM ISTUpdated : Mar 25, 2021, 07:44 AM IST
ಕೊರೋನಾ : 5 ದಿನ ತರಗತಿಗಳು ಬಂದ್

ಸಾರಾಂಶ

ಕೊರೋನಾತಂಕ ರಾಜ್ಯದಲ್ಲಿ ಇದೀಗ ಮತ್ತೊಮ್ಮೆ ಹೆಚ್ಚಾಗಿದೆ. ದಿನದಿನಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದರ ಬೆನ್ನಲ್ಲೇ ಇದೀಗ 5 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. 

ಮಂಗಳೂರು (ಮಾ.25): ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಕೊರೋನಾ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿಯ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ತರಗತಿಯನ್ನು ಮಾ.25ರಿಂದ 29ರ ವರೆಗೆ ರದ್ದುಪಡಿಸಲಾಗಿದೆ.

ಕಳೆದೊಂದು ವಾರದಿಂದ ಮಂಗಳೂರು ವಿವಿ ಕ್ಯಾಂಪಸ್‌ನ ವಿವಿಧ ವಿಭಾಗಗಳಲ್ಲಿ ಕೊರೋನಾ ಸೋಂಕು ಕಾಣಿಸಲಾರಂಭಿಸಿತ್ತು. ಇದೀಗ ಆರಕ್ಕಿಂತಲೂ ಅಧಿಕ ಸೋಂಕು ಪತ್ತೆಯಾದ ಕಾರಣ ಮುಂಜಾಗ್ರತಾ ಕ್ರಮವಾಗಿ ವಿವಿ ತರಗತಿ ರದ್ದತಿಗೆ ಕ್ರಮ ಕೈಗೊಂಡಿದೆ. 

ದೇಶದಲ್ಲಿ ಅತಿಹೆಚ್ಚು ಕೊರೋನಾ ಕೇಸ್‌ ಇರೋ ಜಿಲ್ಲೆಗಳ ಪಟ್ಟಿಯಲ್ಲಿ ಕರ್ನಾಟಕದ 1 ಜಿಲ್ಲೆ ...

ಅಲ್ಲದೆ ವಸತಿ ನಿಲಯಗಳಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿಗಳು ವಸತಿ ನಿಲಯ ಬಿಟ್ಟು ತೆರಳದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.

PREV
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ