ಚಿಕ್ಕಮಗಳೂರು ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಡಿ. 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು(ಡಿ.21): ದತ್ತ ಜಯಂತಿ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ನಾಳೆಯಿಂದ ಡಿ.27ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಡಿ. 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿರುವ ಕಾರಣ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
undefined
ವೀಕೆಂಡ್, ಕ್ರಿಸ್‌ಮಸ್ ಪ್ಲಾನ್ ಮಾಡಿದವರಿಗೆ ನಿರಾಸೆ :
ಡಿಸೆಂಬರ್ 26ರಂದು ದತ್ತಪೀಠದಲ್ಲಿ ದತ್ತಜಯಂತಿ ನಡೆಯುವ ಹಿನ್ನೆಲೆಯಲ್ಲಿ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕಾಫಿನಾಡಲ್ಲಿ ಪಾಸಿಟಿವ್ ಖಾತೆ ತೆಗೆದ ಕೊವಿಡ್, ನಾಲ್ವರಿಗೆ ಸೋಂಕು ದೃಢ!
ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದ್ದು ಪ್ರವಾಸಿಗರಿಗೆ ನಿರಾಸೆ ಮೂಡಿಸಿದೆ.
ಮದ್ಯ ಮಾರಾಟ ಸಂಪೂರ್ಣ ನಿಷೇಧ :
ಜಿಲ್ಲೆಯಲ್ಲಿ ಡಿ.24 ರಿಂದ 3ದಿನಗಳವರೆಗೆ ನಡೆಯಲಿರುವ ದತ್ತಜಯಂತಿಗೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಆಯೋಜನೆ ಮಾಡಿದ್ದು, ಇಲಾಖೆಯ ಸಾವಿರಾರು ಪೊಲೀಸ್ ಸಿಬ್ಬಂದಿಗಳಿಂದ ಚಿಕ್ಕಮಗಳೂರು ನಗರವು ಖಾಕಿಮಯಗೊಳ್ಳಲಿದೆ.ಪ್ರವಾಸಿಗರಿಲ್ಲದೆ ವೀಕೆಂಡ್ ನಲ್ಲಿ ಪ್ರವಾಸಿ ತಾಣಗಳು ಬಣಗುಡುವಂತಾಗಲಿದ್ದು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ, ಹೊನ್ನಮ್ಮನ ಹಳ್ಳ ಸೇರಿದಂತೆ ಹಲವು ಪ್ರದೇಶಗಳು ಸ್ತಬ್ದಗೊಳ್ಳಲಿವೆ.
ಡಿಸೆಂಬರ್ 24ರ ಬೆಳಗ್ಗೆ 6 ರಿಂದ 26ರ ಮಧ್ಯರಾತ್ರಿ 12 ರವರೆಗೆ ಚಿಕ್ಕಮಗಳೂರು,ಕೊಪ್ಪ,ಮೂಡಿಗೆರೆ,ಶೃಂಗೇರಿ, ಎನ್.ಆರ್.ಪುರ ತಾಲೂಕುಗಳಲ್ಲಿ ಮಧ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಇದರಿಂದಾಗಿ ಬಹುತೇಕ ವಹಿವಾಟುಗಳು ಸಹಾ ಸ್ತಬ್ದಗೊಳ್ಳಲಿದೆ. ಈ ನಡುವೆ ನಗರದ ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.