ವಿಜಯಪುರ: ಲಾರಿ-ಆಟೋ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಐವರು ಸಾವು

Published : Feb 08, 2019, 08:11 PM IST
ವಿಜಯಪುರ: ಲಾರಿ-ಆಟೋ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಐವರು ಸಾವು

ಸಾರಾಂಶ

ವಿಜಯಪುರ ತಾಲೂಕಿನ ಬರಟಗಿ ತಾಂಡಾ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

ವಿಜಯಪುರ, [ಫೆ.08]: ಲಾರಿ ಮತ್ತು ಆಟೋ ನಡುವೆ ಬರಟಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. 

ವಿಜಯಪುರ ತಾಲೂಕಿನ ಬರಟಗಿ ತಾಂಡಾ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಲಾರಿ ಡಿಕ್ಕಿ ಹೊಡೆದಿದ ಪರಿಣಾಮ ಆಟೋನಲ್ಲಿದ್ದ ಎರಡು ಮಕ್ಕಳು,ಇಬ್ಬರು ಮಹಿಳೆಯರು ಹಾಗೂ ಚಾಲಕ ಮೃತಪಟ್ಟಿದ್ದಾರೆ.

ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಅರವಿಂದ ಅಗಸರ(32) ಮೃತ ಚಾಲಕ. ಮೃತರೆಲ್ಲರೂ ಡೋಣುರ ಗ್ರಾಮದವರು ಎಂದು ಗುರುತಿಸಲಾಗಿದೆ.

ಡಿಕ್ಕಿಯಾದ ರಭಸಕ್ಕೆ ಆಟೋ ಪಲ್ಟಿಯಾಗಿದ್ದು, ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
click me!

Recommended Stories

ಬಸವತತ್ವ ಪ್ರಚಾರಕ, ವಚನ ಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀಗಳು ಲಿಂಗೈಕ್ಯ
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ