ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಬಂಧ ಕ್ಯಾಮರಾಗಳ ಮಾಹಿತಿ ಆಧರಿಸಿ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಶೇ.50ರಷ್ಟುರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು (ಫೆ.03): ರಾಜ್ಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಬಂಧ ಕ್ಯಾಮರಾಗಳ ಮಾಹಿತಿ ಆಧರಿಸಿ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಾರಿಗೆ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ವಾಹನಗಳ ವಿರುದ್ಧ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇತ್ತೀಚೆಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಸ್ತಾವನೆ ಬಗ್ಗೆ ಚರ್ಚಿಸಿ ಶೇ.50ರಷ್ಟುರಿಯಾಯಿತಿ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟುವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.
ಸಿಬಿಐಗೆ ಸಿಡಿ ಕೇಸ್: ಅಮಿತ್ ಶಾ ಭೇಟಿಗಾಗಿ ದೆಹಲಿಗೆ ತೆರಳಿದ ರಮೇಶ್ ಜಾರಕಿಹೊಳಿ
ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಜಂಕ್ಷನ್‌ಗಳು, ವೃತ್ತಗಳು, ಪ್ರಮುಖ ರಸ್ತೆಗಳು ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಅತ್ಯಾಧುನಿಕ ಕ್ಯಾಮರಾಗಳನ್ನು ಪೊಲೀಸರು ಅಳವಡಿಸಿದ್ದಾರೆ. ದಿನದ 24 ತಾಸು ಈ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತವೆ. ದ್ವಿಚಕ್ರ ವಾಹನ ಸವಾರ ಹೆಲ್ಮೆಟ್ ಧರಿಸದಿದ್ದರೆ, ಸಿಗ್ನಲ್ ಜಂಪ್, ತ್ರಿಬಲ್ ರೈಡಿಂಗ್, ಕಾರು ಚಾಲಕರ ರಾರಯಶ್ ಡ್ರೈವಿಂಗ್ ಸೇರಿದಂತೆ ಇತರೆ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಕ್ಯಾಮರಾ ಮಾಹಿತಿ ಆಧರಿಸಿ ಪೊಲೀಸರು ದಂಡ ವಿಧಿಸುತ್ತಿದ್ದಾರೆ.
ಬೆಂಗಳೂರಿನಲ್ಲಿಯೇ 1,114 ಕೋಟಿ ಬಾಕಿ: ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನದ ಫೋಟೋ ಸೆರೆದು ಸ್ವಯಂ ಚಾಲಿತವಾಗಿ ವಾಹನ ಮಾಲಿಕನಿಗೆ ಸಂಚಾರ ನಿಯಮ ಉಲ್ಲಂಘನೆ ಇ-ಚಲನ್(ಸಂದೇಶ) ರವಾನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಂಡ ಮೊತ್ತ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಫೆ.11ರೊಳಗೆ ಶೇ.50ರಷ್ಟುದಂಡ ಪಾವತಿಸಿ ಪ್ರಕರಣ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ. ಬೆಂಗಳೂರು ನಗರದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆಯ 2.35 ಕೋಟಿ ಪ್ರಕರಣ ಬಾಕಿ ಪ್ರಕರಣಗಳಿವೆ. ಇದರಿಂದ 1,144 ಕೋಟಿ ದಂಡ ಮೊತ್ತ ಬಾಕಿಯಿದೆ.
ತೆಲಂಗಾಣ ಮಾದರಿ: ಇತ್ತೀಚೆಗೆ ನೆರೆಯ ತೆಲಂಗಾಣ ರಾಜ್ಯದಲ್ಲಿ ಸಾಲ ಮೇಳದ ಮಾದರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ರಿಯಾಯಿತಿ ಮೇಳ ನಡೆಸಲಾಗಿತ್ತು. ಸಾರ್ವಜನಿಕರಿಂದ ಈ ರಿಯಾಯಿತಿ ಮೇಳಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ತೆಲಂಗಾಣ ಸರ್ಕಾರದ ಈ ಕ್ರಮ ಎಲ್ಲೆಡೆ ದೊಡ್ಡ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಸಾರಿಗೆ ಇಲಾಖೆ ಆಯುಕ್ತ ತೆಲಂಗಾಣ ಮಾದರಿ ಅನುಸರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ರಾಜ್ಯ ಚುನಾವಣೆಗೆ ಸಚಿವ ಪಿಯೂಷ್ ಗೋಯೆಲ್ ಬಿಜೆಪಿ ಉಸ್ತುವಾರಿ?
ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದ ಬಾಕಿ ದಂಡದಲ್ಲಿ ಶೇ.50ರಷ್ಟುರಿಯಾಯಿತಿ ನೀಡಿದೆ. ಹೀಗಾಗಿ ನಗರದಲ್ಲಿ ವಾಹನ ಸವಾರರು ಬಾಕಿ ದಂಡ ಪಾವತಿಸುವ ವಿಧಾನದ ಬಗ್ಗೆ ಶುಕ್ರವಾರ ಮಾಹಿತಿ ನೀಡಲಾಗುವುದು.
-ಡಾ.ಎಂ.ಎ.ಸಲೀಂ, ನಗರ ಸಂಚಾರ ವಿಭಾಗದ ವಿಶೇಷ ಆಯುಕ್ತ