ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ ವೈಯಕ್ತಿಕ 50 ಸಾವಿರ ನೆರವು: ಬಿ.ಸಿ. ಪಾಟೀಲ

Kannadaprabha News   | Asianet News
Published : May 17, 2021, 11:13 AM IST
ಕೊರೋನಾದಿಂದ ಮೃತಪಟ್ಟ ಕುಟುಂಬಸ್ಥರಿಗೆ ವೈಯಕ್ತಿಕ 50 ಸಾವಿರ ನೆರವು: ಬಿ.ಸಿ. ಪಾಟೀಲ

ಸಾರಾಂಶ

* ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ. ಪಾಟೀಲ * ಜನರು ಜಾಗೃತೆಯಿಂದ ಇರಬೇಕು * ಸರ್ಕಾರದ ಕೋವಿಡ್‌ ನಿಯಮ ಪಾಲಿಸಿ 

ಹಿರೇಕೆರೂರು(ಮೇ.17): ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲೂಕಿನಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಕುಟುಂಬದವರಿಗೆ ವೈಯಕ್ತಿಕವಾಗಿ ತಲಾ 50 ಸಾವಿರ ನೀಡುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಘೋಷಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಎರಡನೇ ಅಲೆಗೆ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಂತಹ ಕುಟುಂಬಗಳಿಗೆ ವೈಯಕ್ತಿಕವಾಗಿ 50 ಸಾವಿರ ನೀಡುತ್ತೇನೆ. ಕ್ಷೇತ್ರದಲ್ಲಿ 18 ಜನ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಸೋಮವಾರದಿಂದ ಕ್ಷೇತ್ರದಲ್ಲಿ ಸಂಚರಿಸಿ ಮೃತರ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ ಸಹಾಯ ನೀಡಿ ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದರು.

"

ಬ್ಯಾಡಗಿ: ಕಳಪೆ ಆಹಾರ ಪೂರೈಕೆ ಖಂಡಿಸಿ ಸೋಂಕಿತರ ಪ್ರತಿಭಟನೆ

ಕೊರೋನಾ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಜನರು ಜಾಗೃತೆಯಿಂದ ಇರಬೇಕು. ಅಲ್ಲದೇ ಮೂರನೇ ಅಲೆಯೂ ಸದ್ಯದಲ್ಲಿ ಬರಲಿದ್ದು, ಅದನ್ನು ಎದುರಿಸಲು ಸಿದ್ಧರಾಗಬೇಕಾಗಿದೆ. ಮುಂಜಾಗ್ರತೆ ವಹಿಸುವುದು ಅತಿ ಅವಶ್ಯಕವಾಗಿದೆ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್‌ ಧರಿಸುವುದನ್ನು ಮರೆಯಬಾರದು. ಸ್ಯಾನಿಟೈಸರ್‌ ಅವಶ್ಯಕವಾಗಿ ಬಳಸಬೆಕು. ಸರ್ಕಾರದ ಕೋವಿಡ್‌ ನಿಯಮಗಳನ್ನು ಪಾಲಿಸಿ ಸುಮ್ಮನೆ ತಿರುಗಾಡುವುದನ್ನು ನಿಲ್ಲಿಸಿ. ಕೊರೋನಾ ನಿಯಂತ್ರಣಕ್ಕೆ ಸಹಕರಿಸಿ. ಸೋಂಕು ದೃಢಪಟ್ಟಲ್ಲಿ ಹೋಂ ಐಸೋಲೇಶನ್‌ ಆಗದೆ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್‌.ಎಸ್‌. ಪಾಟೀಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಿ.ಸಿ. ಪಾಟೀಲ, ಜಿ. ಶಿವನಗೌಡ್ರ ಉಪಸ್ಥಿತರಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona


 

PREV
click me!

Recommended Stories

ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!
BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ