ಪಾಸಿಟಿವ್ ಪ್ರಕರಣ ಹೆಚ್ಚಿರುವ ಉಡುಪಿಯಲ್ಲಿ 51 ಪರೀಕ್ಷಾ ಕೇಂದ್ರ, 14,034 ಪರೀಕ್ಷಾರ್ಥಿಗಳು

By Kannadaprabha News  |  First Published Jun 16, 2020, 8:35 AM IST

ಜೂನ್‌ 25ರಿಂದ ಆರಂಭವಾಗುವ ಎಸ್‌ಎಲ್‌ಎಲ್‌ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 14,034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಜಿಲ್ಲೆಯ 507 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿ 82 ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ನಮ್ಮ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.


ಉಡುಪಿ(ಜೂ.16): ಜೂನ್‌ 25ರಿಂದ ಆರಂಭವಾಗುವ ಎಸ್‌ಎಲ್‌ಎಲ್‌ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 14,034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಜಿಲ್ಲೆಯ 507 ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿ 82 ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ನಮ್ಮ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಸೋಮವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ಧತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ- ಸೌಲಭ್ಯಗಳಿಗೆ ಆದ್ಯತೆ ನೀಡಲಾಗುತ್ತದೆ, ಈ ಬಗ್ಗೆ ಹೆತ್ತವರಿಗೆ ಆತಂಕ ಬೇಡ ಎಂದರು.

Tap to resize

Latest Videos

40 ಜನ ಐಸಿಯುಗೆ: ರಾಜ್ಯದಲ್ಲಿ ತೀವ್ರ ಅಸ್ವಸ್ಥರ ಸಂಖ್ಯೆ ದಿಢೀರ್‌ ಹೆಚ್ಚಳ!

ಕನ್ನಡ ಮಾಧ್ಯಮದಲ್ಲಿ 4,014 ಬಾಲಕರು ಮತ್ತು 3,295 ಬಾಲಕಿಯರು, ಇಂಗ್ಲಿಷ್‌ ಮಾಧ್ಯಮದಲ್ಲಿ 3,321 ಬಾಲಕರು ಮತ್ತು 3,404 ಬಾಲಕಿಯರು ಸೇರಿದಂತೆ ಒಟ್ಟು 7,335 ಬಾಲಕರು ಮತ್ತು 6,699 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದವರು ಹೇಳಿದರು. ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ, ತುರ್ತು ಸಂದರ್ಭಕ್ಕಾಗಿ 12 ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ. ಪ್ರತಿ ಕೇಂದ್ರಕ್ಕೆ 4 ಮಂದಿ ಸ್ಕೌಟ್ಸ್‌- ಗೈಡ್ಸ್‌ ಸ್ವಯಂಸೇವಕರು, ಆರೋಗ್ಯ ಇಲಾಖೆಯ 2 ಸಿಬ್ಬಂದಿಗಳು ಮತ್ತು ಪೊಲೀಸ್‌ ಭದ್ರತೆಯನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇನ್ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ?

ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ವಿತರಿಸಲಾಗುತ್ತದೆ. ಡಾ.ಜಿ. ಶಂಕರ್‌ ಟ್ರಸ್ಟ್‌ ವತಿಯಿಂದ 15000, ಭಾರತ್‌ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ವತಿಯಿಂದ 13460, ಭಾರತ್‌ ವಿಕಾಸ್‌ ಟ್ರಸ್ವ್‌ ವತಿಯಿಂದ 8000 ಮಾಸ್ಕ್ ಪೂರೈಕೆಯಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರುವುದಕ್ಕೆ ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್‌, ಎಸ್‌ಪಿ ವಿಷ್ಣುವರ್ಧನ್‌, ಎಡಿಸಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಡಿಡಿಪಿಐ ಶೇಷಶಯನ ಕಾರಿಂಜ, ಆರ್‌ಟಿಒ ರಾಮಕೃಷ್ಣ ರೈ ಮುಂತಾದವರಿದ್ದರು.

ಸುಳ್ಳು ಸುದ್ದಿ ಹರಡಿದ್ರೆ ಕೇಸು

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಯಾವುದೇ ಗೊಂದಲಗಳಿದ್ದಲ್ಲಿ ಶಿಕ್ಷಣ ಇಲಾಖೆಯ ಸಹಾಯವಾಣಿಯನ್ನು ಸಂಪರ್ಕಿಸಿ, ಖಚಿತ ಮಾಹಿತಿ ಪಡೆಯುವಂತೆ ತಿಳಿಸಿದ್ದಾರೆ.

ಪೋಷಕರಿಗೆ ಆತಂಕ ಬೇಡ

ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದ್ದು, ಪ್ರತಿ ಪರೀಕ್ಷೆಯ ನಂತರ ಪುನಃ ಸ್ಯಾನಿಟೈಸ್‌ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಥರ್ಮಲ್‌ ಸ್ಕ್ಯಾನಿಂಗ್‌ ಕಡ್ಡಾಯವಾಗಿರುತ್ತದೆ. ಕೊರೋನಾ ಕಂಟೈನ್ಮೆಂಟ್‌/ಸೀಲ್‌ಡೌನ್‌ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ. ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

click me!