ಮನೆಯಲ್ಲಿ ದಾಸ್ತಾನಿರಿಸಿದ್ದ 51 ಕೆ.ಜಿ. ಆನೆ ದಂತ ಪತ್ತೆ

Published : Sep 19, 2019, 09:20 AM IST
ಮನೆಯಲ್ಲಿ ದಾಸ್ತಾನಿರಿಸಿದ್ದ 51 ಕೆ.ಜಿ. ಆನೆ ದಂತ ಪತ್ತೆ

ಸಾರಾಂಶ

ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. 

ಬೆಳ್ತಂಗಡಿ [ಸೆ.19] : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು  ಪುತ್ತೂರು ಸಂಚಾರಿ ಅರಣ್ಯ ದಳ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. 

ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿ 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಅಬ್ರಾಹಂ, ಅನ್ವರ್‌, ಸುರೇಶ್‌ ಬಾಬು ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಕಳೆದ ಮೂರು ತಿಂಗಳಿಂದ ಆನೆ ದಂತ ದಾಸ್ತಾನು ಇರಿಸಿದ್ದು ಮಾತ್ರವಲ್ಲದೆ ಮಾರಾಟ ಜಾಲದ ಕುರಿತು ಇಲಾಖೆಗೆ ಲಭಿಸಿದ್ದ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಲಾಗಿತ್ತು.

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ