ಬೀದರ್‌: ಹಾಸ್ಟೇಲ್‌ನಲ್ಲಿ ರಾತ್ರಿ ಉಳಿದ ಅನ್ನ ಸೇವಿಸಿದ 58 ವಿದ್ಯಾರ್ಥಿಗಳು ಅಸ್ವಸ್ಥ

By Kannadaprabha News  |  First Published Nov 14, 2024, 7:38 AM IST

ಅಸ್ವಸ್ಥರನ್ನು ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ಮುಂಜಾನೆಯ ಫಲಾಹಾರ ನೀಡಲಾಗಿತ್ತು. ಇದನ್ನು ತಿಂದ ಕೆಲ ಮಕ್ಕಳಲ್ಲಿ ತಲೆ ಸುತ್ತುವುದು, ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. 

ಹುಮನಾಬಾದ್‌(ನ.14):  ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಕಲ್ಲೂರ ಗ್ರಾಮದ ಹೊರವಲಯದಲ್ಲಿರುವ ಬಸವತೀರ್ಥ ಮಠದಡಿ ನಡೆಯುತ್ತಿರುವ ಬಸವತೀರ್ಥ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ವಿಷಪೂರಿತ ಆಹಾರ ಸೇವಿಸಿ 58 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. 

ಅಸ್ವಸ್ಥರನ್ನು ಹುಮನಾಬಾದ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ಹಾಕಿ ಮುಂಜಾನೆಯ ಫಲಾಹಾರ ನೀಡಲಾಗಿತ್ತು. ಇದನ್ನು ತಿಂದ ಕೆಲ ಮಕ್ಕಳಲ್ಲಿ ತಲೆ ಸುತ್ತುವುದು, ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. 

Tap to resize

Latest Videos

undefined

ಬಳ್ಳಾರಿ: ಮಧ್ಯಾಹ್ನ ಬಿಸಿಯೂಟ ಸೇವಿಸಿ 45ಕ್ಕೂ ಅಧಿಕ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ!

ಜಿಲ್ಲಾ ಪಂಚಾಯಿತಿ ಸಿಇಒ ಡಾ। ಗಿರೀಶ ಬದೋಲೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಲೀಂ ಪಾಶಾ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗೂಡಾಳ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಹಾಗೂ ಇತರರು ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಯೋಗಕ್ಷೇಮ ವಿಚಾರಿಸಿದರು.

click me!