ಪಾರ್ಕ್ ಮೊಹಲ್ಲಾದ ನಜೀರ್ ಅವರ ಮನೆಯಲ್ಲಿ ರಾತ್ರಿ ವೇಳೆಯಲ್ಲಿ ಸಿಲಿಂಡರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿದ್ದು, ಬೆಳಗ್ಗೆ ಗ್ಯಾಸ್ ಒಲೆ ಹಚ್ಚುವ ವೇಳೆಯಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ 6 ಮಂದಿ ಗಾಯಗೊಂಡಿದ್ದಾರೆ.
ಶಿರಾ(ಸೆ.30): ಗ್ಯಾಸ್ ಸಿಲಿಂಡರ್‌ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಮನೆಯ ಮೇಲ್ಛಾವಣಿ ಕುಸಿದು ಬಿದ್ದು 6 ಜನರಿಗೆ ಗಾಯಗಳಾಗಿರುವ ಘಟನೆ ನಗರದ ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾ ಬಡಾವಣೆಯಲ್ಲಿ ನಡೆದಿದೆ.
ಪಾರ್ಕ್ ಮೊಹಲ್ಲಾದ ನಜೀರ್ ಅವರ ಮನೆಯಲ್ಲಿ ರಾತ್ರಿ ವೇಳೆಯಲ್ಲಿ ಸಿಲಿಂಡರ್ ನಲ್ಲಿದ್ದ ಗ್ಯಾಸ್ ಸೋರಿಕೆಯಾಗಿದ್ದು, ಬೆಳಗ್ಗೆ ಗ್ಯಾಸ್ ಒಲೆ ಹಚ್ಚುವ ವೇಳೆಯಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ 6 ಮಂದಿ ಗಾಯಗೊಂಡಿದ್ದಾರೆ.
undefined
ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ: ಪರಂ ತಾಕೀತು
ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆರಂಭದಲ್ಲಿ ಸಿಲಿಂಡರ್ ಸ್ಫೋಟವಾಗಿರುವ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆ ಸ್ಥಳಕ್ಕೆ ಬಾಂಬ್ ನಿಷ್ಟ್ರೀಯ ದಳದವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಸಿಲಿಂಡರ್ ಸ್ಫೋಟಗೊಂಡಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಶಾಸಕ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.