6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಲಾಗಿದೆ
ದಾವಣಗೆರೆ [ಡಿ.08]: ಮನೆ ಪಾಠ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.
ಇಲ್ಲಿನ ಲೆನಿನ್ ನಗರ ನಿವಾಸಿ ಅಜೀಜ್ ಸಾಬ್ ನದಾಫ್ ಬಿನ್ ಹಜರತ್ ಸಾಬ್(58) ಶಿಕ್ಷೆಗೆ ಗುರಿಯಾದ ಆರೋಪಿ. ತನ್ನ ಮನೆಯ ಸಮೀಪ 28.11.2018ರಂದು ಮನೆ ಪಾಠ ಮುಗಿಸಿಕೊಂಡು ಮನೆಗೆ ಹೊರಟಿದ್ದ 6 ವರ್ಷದ ಬಾಲಕಿಯನ್ನು ಮೆಟ್ಟಿಲುಗಳ ಬಳಿ ಕರೆದೊಯ್ದು ಮಗುವಿನೊಂದಿಗೆ ಆರೋಪಿ ಅಜೀಬ್ ಸಾಬ್ ಲೈಂಗಿಕ ಹಲ್ಲೆ ನಡೆಸಿದ್ದನು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಅಜೀಜ್‌ನ ವಿರುದ್ಧ ಆರೋಪಣಾ ಪಟ್ಟಿಯನ್ನು ತನಿಖಾಧಿಕಾರಿ ವೃತ್ತ ನಿರೀಕ್ಷಕಿ ನಾಗಮ್ಮ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಸ್.ನಾಗಶ್ರೀ ಅವರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಜೀಜ್ ಸಾಬ್‌ನಿಗೆ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 25 ಸಾವಿರ ರು. ದಂಡ ವಿಧಿಸಿ, ತೀರ್ಪು ನೀಡಿದರು. ಸರ್ಕಾರದ ಪರವಾಗಿ ವಿಶೇಷ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಶೌಕತ್ ಅಲಿ ಎಸ್.ಎಚ್.ಎಸ್. ಅವರು ವಾದ ಮಂಡಿಸಿದ್ದರು.