ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ : ಮೂರನೇ ಅಲೆಗೆ ಸರ್ವಸಿದ್ಧತೆ

Suvarna News   | Asianet News
Published : Jul 14, 2021, 02:14 PM IST
ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ : ಮೂರನೇ ಅಲೆಗೆ  ಸರ್ವಸಿದ್ಧತೆ

ಸಾರಾಂಶ

 ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ  ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮಾಹಿತಿ ಹಂಚಿಕೆಯಾಗುವ ವ್ಯಾಕ್ಸಿನ್‌ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ

ಬೆಂಗಳೂರು (ಜು.14): ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಶೇಷಾದ್ರಿಪುರದ ಮಾರುತಿ ಆಸ್ಪತ್ರೆಯಲ್ಲಿಂದು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮತ್ತು ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಡಿಸಿಎಂ ಪ್ರತೀ ತಿಂಗಳೂ ಹಂಚಿಕೆಯಾಗುವ ವ್ಯಾಕ್ಸಿನ್‌ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರಕಾರದಿಂದ ಮಾಸಿಕ 60 ಲಕ್ಷ ಲಸಿಕೆ ಹಂಚಿಕೆಯಾಗುತ್ತಿದೆ ಎಂದರು.

ದೈನಂದಿನ ಲಸಿಕೆ ನೀಡಿಕೆಯಲ್ಲಿ ಕುಸಿತ!

ಈ ಹಂಚಿಕೆ ಆಧಾರದಲ್ಲಿಯೇ ರಾಜ್ಯ ಸರಕಾರ ತಿಂಗಳಿಗೆ ರಾಜ್ಯಾದ್ಯಂತ 60 ಲಕ್ಷ ಜನರಿಗೆ ಲಸಿಕೆ ನೀಡುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ 60 ಲಕ್ಷ ಜನರಿಗೆ ಲಸಿಕೆ ಕೊಡಲಾಗಿತ್ತು. ಈ ತಿಂಗಳಲ್ಲೂ  ಅಷ್ಟೇ ಪ್ರಮಾಣದ ಜನರಿಗೆ ವ್ಯಾಕ್ಸಿನ್‌ ಕೊಡಲಾಗುವುದು. ಇನ್ನೂ ಹೆಚ್ಚು ಪ್ರಮಾಣದಲ್ಲಿ ಲಸಿಕೀಕರಣ ಮಾಡಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂದರು.

12+ ಮೇಲ್ಪಟ್ಟಮಕ್ಕಳಿಗೆ ಈ ವಾರವೇ ಲಸಿಕೆಗೆ ಅಸ್ತು?

ಮೂರನೇ ಅಲೆ ಬಗ್ಗೆ ಆತಂಕ ಬೇಡ :  ಮೂರನೇ ಅಲೆಯ ಬಗ್ಗೆ ಎಲ್ಲರಿಗೂ ಆತಂಕ ಇರುವುದು ನಿಜ. ಹಾಗಂತ ಹೆದರಬೇಕಿಲ್ಲ. ಈಗಾಗಲೇ ಕೇಂದ್ರದ ನೆರವಿನಿಂದ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಆಕ್ಸಿಜನ್‌ ಉತ್ಪಾದನೆ ಮತ್ತು ಸಂಗ್ರಹ, ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು ಸೇರಿ ಎಲ್ಲ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಇದರ ಜತೆಯಲ್ಲೇ ಲಸಿಕೀಕರಣವನ್ನೂ ಹೆಚ್ಚಿಸಲಾಗುತ್ತಿದೆ. ರಾಜ್ಯದಲ್ಲಿ ಕೋವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆಗಳನ್ನು ಕೊಡಲಾಗುತ್ತಿದೆ. ಕೇಂದ್ರ ಸರಕಾರಕ್ಕೆ ಇನ್ನೂ ಹೆಚ್ಚಿನ ಲಸಿಕೆಗಾಗಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ, ಲಸಿಕೆ ಕಂಪನಿಗಳಿಗೆ ಉತ್ಪಾದನೆ ಹೆಚ್ಚಿಸುವಂತೆ ಕೋರಲಾಗಿದೆ. ಜತೆಗೆ, ಲಭ್ಯವಾಗುತ್ತಿರುವ ಲಸಿಕೆಯನ್ನೂ ಕ್ಷಮತೆಯಿಂದ ಬಳಸಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ