ಬೆಂಗಳೂರು ಅಭಿವೃದ್ಧಿಗೆ 6,500 ಕೋಟಿ: ಸಿಎಂ ಬೊಮ್ಮಾಯಿ

Published : Feb 17, 2023, 07:04 AM IST
ಬೆಂಗಳೂರು ಅಭಿವೃದ್ಧಿಗೆ 6,500 ಕೋಟಿ: ಸಿಎಂ ಬೊಮ್ಮಾಯಿ

ಸಾರಾಂಶ

ಸಂಚಾರ ದಟ್ಟಣೆ, ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ, ಗೋವಿಂದರಾಜ ನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ. 

ಬೆಂಗಳೂರು(ಫೆ.17):  ನಗರದ ಸಂಚಾರಿ ದಟ್ಟಣೆ, ಮೂಲಭೂತ ಸಮಸ್ಯೆಗಳ ನಿವಾರಣೆಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು ಬೆಂಗಳೂರಿನ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 6500 ಕೋಟಿ ರು.ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಗುರುವಾರ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣೆಯಲ್ಲಿ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಮಠಗಳು ಶಿಕ್ಷಣದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿವೆ ಎಂದ ಅವರು, ಬೆಂಗಳೂರು ನಗರ ಡೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಜನಸಂಖ್ಯೆ ಮತ್ತು ವಾಹನ ಸಂಖ್ಯೆ ಏರುತ್ತಿದೆ. ಜನರಿಗೆ ಮೂಲಸೌಕರ್ಯ ಒದಗಿಸುವುದು ಮತ್ತು ಸಂಚಾರಿ ದಟ್ಟಣೆ ನಿಯಂತ್ರಿಸುವುದು ಸವಾಲಿನ ಕೆಲಸವಾಗಿದ್ದು ಈ ನಡುವೆಯೇ ನಗರವನ್ನು ಅಭಿವೃದ್ಧಿಪಡಿಸಬೇಕಿದೆ ಎಂದರು.

ಬೆಂಗಳೂರು ನಗರದ ಪ್ರವಾಹ ಸಮಸ್ಯೆ ನಿವಾರಣೆಗಾಗಿ .1800 ಕೋಟಿಗಳ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ 75 ಕೊಳಗೇರಿಗಳ ಅಭಿವೃದ್ದಿ, 75 ಕೆರೆಗಳನ್ನು ಉಳಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಬ್ರಾಂಡ್‌ ಬೆಂಗಳೂರಿನ ಖ್ಯಾತಿ ಉಳಿಸಲು ಪ್ರತಿಯೊಬ್ಬರ ಶ್ರಮವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ನಗರದ ಕೀರ್ತಿಯನ್ನು ಇನ್ನಷ್ಟುಹೆಚ್ಚಿಸಲು ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಲಿದೆ. ಅನ್ನ, ಆಶ್ರಯ, ಉದ್ಯೋಗ ಕೊಟ್ಟಬೆಂಗಳೂರು ವಿಶ್ವಮಟ್ಟದಲ್ಲಿ ಕೀರ್ತಿ ಗಳಿಸುವಂತಾಗಬೇಕು ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಭದ್ರಾವತಿ ಕಾರ್ಖಾನೆ ಮುಚ್ಚಲ್ಲ: ಸಿಎಂ ಬೊಮ್ಮಾಯಿ

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ಬಾಲಗಂಗಾಧರನಾಥ ಸ್ವಾಮೀಜಿ ಅವರು ಶಿಕ್ಷಣ, ಆರೋಗ್ಯ ಮತ್ತು ಪರಿಸರ ಕುರಿತು ಅಪಾರ ಸಾಧನೆ ಮಾಡಿದ್ದಾರೆ. ಅವರ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ಆಸ್ಪತ್ರೆಯಲ್ಲಿ ಒಂದೇ ಸೂರಿನಲ್ಲಿ ಎಲ್ಲ ವೈದ್ಯಕೀಯ ಸೌಲಭ್ಯ ಸಿಗಲಿದೆ. ಜನರು ಒತ್ತಡದ ಜೀವನದಿಂದ ಅನಾರೋಗ್ಯ ಪೀಡಿತರಾಗುವುದು ಸಾಮಾನ್ಯವಾಗಿದೆ. ಅವರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ಈ ಆಸ್ಪತ್ರೆ ನಿರ್ಮಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಡಾ.ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ಕಂದಾಯ ಸಚಿವ ಆರ್‌.ಅಶೋಕ್‌, ವೈದ್ಯಕೀಯ ಸಚಿವ ಕೆ.ಸುಧಾಕರ್‌, ಅಬಕಾರಿ ಸಚಿವ ಕೆ.ಗೋಪಾಲಯ್ಯ ಉಪಸ್ಥಿತರಿದ್ದರು.

ಆರೋಗ್ಯ ಕ್ಷೇತ್ರದಲ್ಲಿ ಸಾಧನೆ: ಸೋಮಣ್ಣ

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಗೋವಿಂದರಾಜನಗರ ಕ್ಷೇತ್ರ ಹೊಸ ಮೈಲುಗಲ್ಲು ಸಾಧಿಸಿದೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಸಮರ್ಪಣೆ ಮಾಡಲಾಗಿದೆ. ಬಡವರು, ಮಧ್ಯಮ ವರ್ಗದವರ ಜನಸಂಖ್ಯೆ ಹೆಚ್ಚಿಸುವ ಈ ಕ್ಷೇತ್ರದಲ್ಲಿ ಧ್ವನಿ ಇಲ್ಲದ ಜನರಿಗೆ, ಬಡವರ ಅನುಕೂಲಕ್ಕೆ ಈ ಆಸ್ಪತ್ರೆ ನಿರ್ಮಿಸಲಾಗಿದೆ. ಪಂತರಪಾಳ್ಯದಲ್ಲಿ 200ಹಾಸಿಗೆ ಸಾಮರ್ಥ್ಯದ ಹೈಟೆಕ್‌ ಆಸ್ಪತ್ರೆಯನ್ನ ಕರ್ನಾಟಕ ರತ್ನ ಪುನೀತ್‌ ರಾಜ್‌ ಕುಮಾರ್‌ ಸವಿ ಸ್ಮರಣೆಯಲ್ಲಿ ನಿರ್ಮಾಣ ಮಾಡುತ್ತಿದ್ದು ಮುಂದಿನ ತಿಂಗಳು ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು.

PREV
Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಬೆಂಗಳೂರಿನ ಗುಲಾಬಿ ಮೆಟ್ರೋ ಮಾರ್ಗಕ್ಕೆ ಶೀಘ್ರ ಪ್ರೊಟೊಟೈಪ್‌ ರೈಲು