ಚಿಕ್ಕಬಳ್ಳಾಪುರದಲ್ಲಿ 66 ಕುಷ್ಠ ರೋಗ ಪ್ರಕರಣ ಪತ್ತೆ

By Kannadaprabha News  |  First Published Jan 30, 2020, 10:11 AM IST

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಜ.30 ರಿಂದ ಫೆ.13 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಪ್ರಸ್ತುತ ಸಾಲಿನಲ್ಲಿ ಒಟ್ಟು 66 ಪ್ರಕರಣಗಳು ಪತ್ತೆಯಾಗಿವೆ.


ಚಿಕ್ಕಬಳ್ಳಾಪುರ(ಜ.30): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನ ಜ.30 ರಿಂದ ಫೆ.13 ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಪ್ರಸ್ತುತ ಸಾಲಿನಲ್ಲಿ ಒಟ್ಟು 66 ಪ್ರಕರಣಗಳು ಪತ್ತೆಯಾಗಿವೆ.

ಕುಷ್ಠ ರೋಗ ಪ್ರಕರಣ ಪತ್ತೆ ಅಭಿಯಾನದಡಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು ಮನೆ ಮನೆಗೆ ಭೇಟಿ ನೀಡಿ ಕುಷ್ಠ ರೋಗ ಲಕ್ಷಣಗಳ ಕುರಿತು ಜಾಗೃತಿ ಮೂಡಿಸಿ ಅಂತಹ ಸಂಶಯಾಸ್ಪದ ಪ್ರಕರಣ ಕಂಡು ಬಂದಲ್ಲಿ ಪ್ರಕರಣ ದಾಖಲಿಸಿಕೊಂಡು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ.

Tap to resize

Latest Videos

ರೋಗ ಹೇಗೆ ಹರಡುತ್ತದೆ?

ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ 282 ಪ್ರಕರಣಗಳು ಪತ್ತೆಯಾಗಿದ್ದು, ರೋಗಪೀಡಿತ ಕ್ತಿ ಪ್ರಾರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆಯದಿದ್ದರೆ 18 ತಿಂಗಳ ನಂತರ ಅದು ಕುಷ್ಠರೋಗವಾಗಿ ಪರಿವರ್ತನೆಗೊಳ್ಳುತ್ತದೆ. ಪ್ರಾರಂಭಿಕ ಹಂತದಲ್ಲಿಯೇ ಕುಷ್ಠ ರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ.

ರೋಗದ ಲಕ್ಷಣಗಳೇನು?

ದೇಹದ ಯಾವುದೇ ಭಾಗದ ಮೇಲೆ ತಿಳಿ ಬಿಳಿ ಅಥವಾ ತಾಮ್ರಬಣ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಉಂಟಾಗುವುದು, ಕೈ ಕಾಲುಗಳಲ್ಲಿ ಜೋಮು ಉಂಟಾಗುವುದು ಕುಷ್ಠ ರೋಗದ ಪ್ರಾರಂಭಿಕ ಹಂತದ ಲಕ್ಷಣಗಳಾಗಿವೆ. ಗಂಟುಗಳಾಗುವುದು, ಕಣ್ಣುಗಳನ್ನು ಮುಚ್ಚಲು ಸಾಧ್ಯವಾಗದಿರುವುದು, ಕೈಯಲ್ಲಿ ಹುಣ್ಣು, ಪಾದ ಮತ್ತು ಕೈ ಬೆರಳುಗಳು ಮಡಚಿರುವುದು, ಕೈಗಳಲ್ಲಿ ಮತ್ತು ಪಾದಗಳಲ್ಲಿ ಸಂವೇದನೆಯ ಶಕ್ತಿ ಇಲ್ಲದಿರುವುದು ಕುಷ್ಠ ರೋಗದ ಲಕ್ಷಣಗಳಾಗಿವೆ.

ಗೌರಿಬಿದನೂರು ಹೆಚ್ಚು, ಚಿಕ್ಕಬಳ್ಳಾಪುರ ಕಡಿಮೆ!

2018-19ರಲ್ಲಿ ಜಿಲ್ಲೆಯಲ್ಲಿ ಒಟ್ಟು 115 ಕುಷ್ಠ ರೋಗ ಪ್ರಕರಣಗಳು ಪತ್ತೆಯಾಗಿದ್ದು, 2019-20 ರಲ್ಲಿ ಒಟ್ಟು 66 ಕುಷ್ಠ ರೋಗ ಪ್ರಕರಣ ಪತ್ತೆಯಾಗಿವೆ. ಗೌರಿಬಿದನೂರು 19, ಬಾಗೇಪಲ್ಲಿ 17, ಚಿಂತಾಮಣಿ 14, ಶಿಡ್ಲಘಟ್ಟ7, ಗುಡಿಬಂಡೆ 6, ಚಿಕ್ಕಬಳ್ಳಾಪುರ 3 ಪ್ರಕರಣಗಳು ಪತ್ತೆಯಾಗಿದ್ದು, ಅತಿ ಹೆಚ್ಚು ಗೌರಿಬಿದನೂರು, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಅತಿ ಕಡಿಮೆ ಕುಷ್ಠರೋಗ ಪ್ರಕರಣ ಪತ್ತೆಯಾಗಿವೆ.

ಕೊರೋನಾ ಸಾವು 132ಕ್ಕೇರಿಕೆ, ಚೀನಾದಲ್ಲಿ ಮರಣ ಮೃದಂಗ!

ಜಿಲ್ಲೆಯಲ್ಲಿ ಜ.30 ರಿಂದ ಫೆ.13 ರವರೆಗೆ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ವರ್ಶ ಕುಷ್ಠ ಅರಿವು ಆಂದೋಲನ ಹಮ್ಮಿಕೊಂಡು ಸಾರ್ವಜನಿಕರಿಗೆ ಕುಷ್ಠರೋಗದ ಜಾಗೃತಿ ಮೂಡಿಸಲಾಗುತ್ತದೆ. ಶಾಲಾ- ಕಾಲೇಜು, ತಾಲೂಕು ಆಸ್ಪತ್ರೆಗಳಲ್ಲಿ, ಜನಸಂದಣಿ ಪ್ರದೇಶದಲ್ಲಿ ಸಾರ್ವಜನಿಕರಿಗೆ ರೋಗ ಲಕ್ಷಣ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಯಲ್ಲಾ ರಮೇಶ್‌ ಬಾಬು ಹೇಳಿದ್ದಾರೆ.

click me!