ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಮುಖಾಮುಖಿ ಡಿಕ್ಕಿ, 68 ಮಂದಿಗೆ ಗಾಯ, ತಪ್ಪಿದ ಭಾರೀ ದುರಂತ

Published : Jul 03, 2022, 09:34 PM IST
ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಮುಖಾಮುಖಿ ಡಿಕ್ಕಿ, 68 ಮಂದಿಗೆ ಗಾಯ, ತಪ್ಪಿದ ಭಾರೀ ದುರಂತ

ಸಾರಾಂಶ

*  ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬೈಚವಳ್ಳಿ- ಚಿನ್ನಳ್ಳಿ ತಿರುವಿನಲ್ಲಿ ನಡೆದ ಘಟನೆ *  ವಿದ್ಯಾರ್ಥಿಗಳು ಸೇರಿ 68 ಜನರಿಗೆ ಗಾಯ *  ಗಾಯಾಳುಗಳನ್ನು ಬೇರೊಂದು ಬಸ್‌ನಲ್ಲಿ ಆಸ್ಪತ್ರೆಗೆ ಕರೆತಂದ ಶಾಸಕ ಶ್ರೀನಿವಾಸ್‌ ಮಾನೆ  

ಹಾನಗಲ್ಲ(ಜು.03):  ತಾಲೂಕಿನ ಬೈಚವಳ್ಳಿ- ಚಿನ್ನಳ್ಳಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 68ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಬೆಳಗ್ಗೆ ಹಾನಗಲ್ಲಿನಿಂದ ಬಮ್ಮನಹಳ್ಳಿಗೆ ಚಲಿಸುತ್ತಿದ್ದ ಬಸ್‌ ಹಾಗೂ ದಶರಥಕೊಪ್ಪದಿಂದ ಹಾನಗಲ್ಲಿಗೆ ಚಲಿಸುತ್ತಿದ್ದ ಬಸ್‌ನ ಮಧ್ಯ ಈ ಅಪಘಾತ ಸಂಭವಿಸಿದೆ. ಶನಿವಾರ ಬೆಳಗಿನ ವೇಳೆ ಶಾಲೆ ಇರುವುದರಿಂದ ಹಾನಗಲ್ಲ ಮತ್ತು ಅಕ್ಕಿಆಲೂರಿನ ಶಾಲಾ- ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕೃಷಿ ಕಾರ್ಮಿಕರಿಗೆ ಬಂತು ಲೇಬರ್‌ ಬ್ಯಾಂಕ್‌..!

ಬಸ್‌ ಚಾಲಕ ಸೇರಿದಂತೆ ಒಟ್ಟು 14 ಜನರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನುಳಿದವರಿಗೆ ಹಾನಗಲ್‌ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎರಡೂ ಬಸ್ಸಿನ ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಈ ಕುರಿತು ಹಾನಗಲ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಹಾನಗಲ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದ ಶಾಸಕ:

ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿದ ಶಾಸಕ ಶ್ರೀನಿವಾಸ್‌ ಮಾನೆ ಗಾಯಾಳುಗಳಿಗೆ ಧೈರ್ಯ ತುಂಬಿದರು. ಬೇರೊಂದು ಬಸ್‌ನಲ್ಲಿ ಸ್ವತಃ ಗಾಯಾಳುಗಳನ್ನು ಹಾನಗಲ್‌ ತಾಲೂಕು ಆಸ್ಪತ್ರೆಗೆ ಕರೆತರುವ ಮೂಲಕ ಸೂಕ್ತ ಚಿಕಿತ್ಸೆ ದೊರಕಿಸಿ, ಗಮನ ಸೆಳೆದರು.

ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಿಭಟನೆ: ಟೈರ್‌ ಸುಡುವ ವೇಳೆ ಹಿಂದೂ ಕಾರ್ಯಕರ್ತರಿಗೆ ತಗುಲಿದ ಬೆಂಕಿ..!

ಮುಖಂಡರುಗಳ ಭೇಟಿ:

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ಪಕ್ಷಗಳ ಮುಖಂಡರುಗಳಾದ ಮಾಜಿ ಶಾಸಕ ಶಿವರಾಜ ಸಜ್ಜನ, ರಾಜಶೇಖರಗೌಡ ಕಟ್ಟೆಗೌಡ್ರ ಮೊದಲಾದವರು ಆಸ್ಪತ್ರೆಗೆ ಧಾವಿಸಿ ಅಪಘಾತಕ್ಕೊಳಗಾದವರಿಗೆ ಹಾಗೂ ಕುಟುಂಬಕ್ಕೆ ಧೈರ್ಯ ಹೇಳಿದರು. ಕೆಎಸ್‌ಆರ್‌ಟಿಸಿ ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ಹೇಳಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

ಹಾನಗಲ್ಲ ತಾಲೂಕಿನ ಬೈಚವಳ್ಳಿ ಸಮೀಪ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆ ಸ್ಥಳಕ್ಕೆ ದೌಡಾಯಿಸಿದ ಶಾಸಕ ಶ್ರೀನಿವಾಸ್‌ ಮಾನೆ ಗಾಯಾಳುಗಳಿಗೆ ಧೈರ್ಯ ಹೇಳಿ, ಸ್ವತಃ ಆಸ್ಪತ್ರೆಗೆ ಕರೆತಂದರು.
 

PREV
Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!