10 ಸಾವಿರಕ್ಕೆ ಇಳಿದ ಸೋಂಕಿತರ ಸಕ್ರಿಯ ಕೇಸ್‌

Kannadaprabha News   | Asianet News
Published : Dec 19, 2020, 07:36 AM IST
10 ಸಾವಿರಕ್ಕೆ ಇಳಿದ ಸೋಂಕಿತರ ಸಕ್ರಿಯ ಕೇಸ್‌

ಸಾರಾಂಶ

ಬೆಂಗಳೂರಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 3,81,623ಕ್ಕೆ ಏರಿಕೆ| ಗುಣಮುಖರ ಸಂಖ್ಯೆ 3,66,888ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,478ಕ್ಕೆ ಇಳಿಕೆ| ಈವರೆಗೆ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4256ಕ್ಕೆ ಏರಿಕೆ| 

ಬೆಂಗಳೂರು(ಡಿ.19): ನಗರ ವ್ಯಾಪ್ತಿಯಲ್ಲಿ ಶುಕ್ರವಾರ 687 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 443 ಮಂದಿ ಗುಣಮುಖರಾಗಿದ್ದಾರೆ. ನಾಲ್ಕು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಮೂಲಕ ನಗರದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 3,81,623ಕ್ಕೆ ಏರಿಕೆಯಾಗಿದ್ದು, ಗುಣಮುಖರ ಸಂಖ್ಯೆ 3,66,888ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10,478ಕ್ಕೆ ಇಳಿಕೆಯಾಗಿದ್ದು, ಈ ಪೈಕಿ 106 ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕೊರೋನಾ ಬುಲೆಟಿನ್: ಕರ್ನಾಟದಲ್ಲಿ ಮೂರಂಕಿ ದಾಟಿದ ಸೋಂಕಿತರ ಸಂಖ್ಯೆ

ಶುಕ್ರವಾರ ನಗರದಲ್ಲಿ ನಾಲ್ಕು ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೆ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4256ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!