ಹಾವೇರಿ: ₹693 ಕೋಟಿ ಮೊತ್ತದ ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ

By Kannadaprabha News  |  First Published Feb 1, 2023, 10:31 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ. 1ರಂದು ಬ್ಯಾಡಗಿ ಕ್ಷೇತ್ರದ ಬಹು ನಿರೀಕ್ಷಿತ ಆಣೂರ ಬುಡಪನಳ್ಳಿ ಹಾಗೂ ಅಸುಂಡಿ ಏತ ನೀರಾವಾರಿ ಯೋಜನೆ, ಕಾಗಿನೆಲೆ ನಿಸರ್ಗ ಚಿಕಿತ್ಸಾ ಕೇಂದ್ರ ಒಳಗೊಂಡಂತೆ .483 ಕೋಟಿ ಮೊತ್ತದ ಮೂರು ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ .210 ಕೋಟಿ ಮೊತ್ತದ ಉದ್ದೇಶಿತ ಎಂಟು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.


ಹಾವೇರಿ (ಫೆ.1) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ. 1ರಂದು ಬ್ಯಾಡಗಿ ಕ್ಷೇತ್ರದ ಬಹು ನಿರೀಕ್ಷಿತ ಆಣೂರ ಬುಡಪನಳ್ಳಿ ಹಾಗೂ ಅಸುಂಡಿ ಏತ ನೀರಾವಾರಿ ಯೋಜನೆ, ಕಾಗಿನೆಲೆ ನಿಸರ್ಗ ಚಿಕಿತ್ಸಾ ಕೇಂದ್ರ ಒಳಗೊಂಡಂತೆ .483 ಕೋಟಿ ಮೊತ್ತದ ಮೂರು ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ .210 ಕೋಟಿ ಮೊತ್ತದ ಉದ್ದೇಶಿತ ಎಂಟು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಬುಧವಾರ ಬೆಳಗ್ಗೆ 12 ಗಂಟೆಗೆ ಬ್ಯಾಡಗಿ ತಾಲೂಕು ಶಿಡೇನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಮುಕ್ತೇಶ್ವರ ದೇವಾಲಯದ ಉದ್ಘಾಟನೆ ನೆರವೇರಿಸಿ ಮಧ್ಯಾಹ್ನ 1.30ಕ್ಕೆ ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

Tap to resize

Latest Videos

undefined

 

ಡೀಸೆಲ್‌ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ತುಂಗಾ ಮೇಲ್ದಂಡೆ ಯೋಜನೆಯಡಿ .460.50 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾದ ಬ್ಯಾಡಗಿ ತಾಲೂಕಿನ ಆಣೂರು, ಬುಡಪನಳ್ಳಿ ಹಾಗೂ ರಾಣಿಬೆನ್ನೂರ ತಾಲೂಕಿನ ಅಸುಂಡಿ ಗ್ರಾಮಗಳ ಏತನೀರಾವರಿ ಯೋಜನೆ ಉದ್ಘಾಟಿಸಲಿದ್ದಾರೆ.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದಿಂದ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ .15.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕನಕ ಮ್ಯೂಸಿಯಂ ಹಾಗೂ ನಿಸರ್ಗ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸುವರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸುಣಕಲ್‌ ಬಿದರಿಯಲ್ಲಿ .7.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತರ ಮೂರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ ನೆರವೇರಿಸುವರು.

ಶಂಕುಸ್ಥಾಪನೆ:

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ .150 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಆಣೂರು ಮತ್ತು ಕಬ್ಬೂರು ಗ್ರಾಮದ ಬಹುಗ್ರಾಮ ಕುಡಿಯುವ ನೀರು ಯೋಜನೆ ಹಾಗೂ .3 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಬ್ಯಾಡಗಿ ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರವಾಸಿ ಮಂದಿರ (ಐ.ಬಿ) ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಕೃಷಿ ಇಲಾಖೆಯಿಂದ .8.84 ಕೋಟಿ ವೆಚ್ಚದಲ್ಲಿ ನಿರ್ಮಾಣ ಉದ್ದೇಶದ ದೇವಿಹೊಸೂರು ಕೃಷಿ ತರಬೇತಿ ಕೇಂದ್ರ ಕಟ್ಟಡ, ಮೂಸಿಯಂ, ಆಡಳಿತ ಕಟ್ಟಡ, ಬಯಲು ರಂಗಮಂದಿರ, ರೈತ ವಸತಿಗೃಹ ನಿರ್ಮಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ .3.26 ಕೋಟಿ ವೆಚ್ಚದಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವರು.

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ವತಿಯಿಂದ .15.31 ಕೋಟಿ ವೆಚ್ಚದಲ್ಲಿ ದೇವಿಹೊಸೂರಿನಲ್ಲಿರುವ ತೋಟಗಾರಿಕೆ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ​​​​-ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡ ಶಂಕುಸ್ಥಾಪನೆ ಹಾಗೂ .3.64 ಕೋಟಿ ವೆಚ್ಚದಲ್ಲಿ ಕಾರ್ಯಾಗಾರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ .16.45 ಕೋಟಿ ವೆಚ್ಚದಲ್ಲಿ ಹನಮನಮಟ್ಟಿಯಲ್ಲಿ ಕೃಷಿ ಮಹಾವಿದ್ಯಾಲಯದ ಇ ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರ ಕೃಷಿ ವಸ್ತುಸಂಗ್ರಹಾಲಯ ಹಾಗೂ ಸಂಶೋಧನಾ ಸಂಕೀರ್ಣ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಕೆಪಿಟಿಸಿಎಲ್‌ ವತಿಯಿಂದ .9.58 ಕೋಟಿ ವೆಚ್ಚದಲ್ಲಿ ಕುಳೇನೂರ ಗ್ರಾಮದಲ್ಲಿ 110/11 ಕೆವಿ ವಿದ್ಯುತ್‌ ಉಪ ಕೇಂದ್ರ ಸ್ಥಾಪನೆ ಕಾಮಗಾರಿ ಆರಂಭಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಹಾಲಿ, ಮಾಜಿ ಸಿಎಂಗಳು ಪುಡಿರೌಡಿಗಳಂತೆ ಮಾತಾಡ್ತಾರೆ; ಎಚ್.ವಿಶ್ವನಾಥ್

ಗಣ್ಯರು ಭಾಗಿ:

ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ, ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ಕುಮಾರ, ಕಂದಾಯ ಇಲಾಖೆ ಸಚಿವ ಆರ್‌.ಅಶೋಕ್‌, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್‌, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಮುನಿರತ್ನ, ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರಬೈಲ್‌ ಶಿವರಾಮ್‌ ಹೆಬ್ಬಾರ್‌, ಕೃಷಿ ಸಚಿವ ಬಿ.ಸಿ. ಪಾಟೀಲ, ಸಂಸದ ಶಿವಕುಮಾರ, ಶಾಸಕ ನೆಹರು ಓಲೇಕಾರ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ವಹಿಸಲಿದ್ದಾರೆ.

click me!