ಉಡುಪಿಯಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Published : Feb 15, 2020, 08:26 PM ISTUpdated : Feb 15, 2020, 08:59 PM IST
ಉಡುಪಿಯಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಸಾರಾಂಶ

ಟೂರಿಸ್ಟ್ ಬಸ್ ವೊಂದು ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.

ಉಡುಪಿ, [ಫೆ.15]: ರಸ್ತೆ ಪಕ್ಕದ ಬಂಡೆಗೆ ಟೂರಿಸ್ಟ್ ಬಸ್  ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉಡುಪಿಯ ಕಾರ್ಕಳ ತಾಲೂಕಿನ ಮಾಳ ಬಳಿ ಸಂಭವಿಸಿದೆ.

ಇಂದು [ಶನಿವಾರ] ಮೈಸೂರಿನಿಂದ ಮಂಗಳೂರಿಗೆ ಹೊರಟ್ಟಿದ್ದ ಬಸ್ ಉಡುಪಿ-ಚಿಕ್ಕಮಗಳೂರು ಘಾಟಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಎಸ್.ಕೆ ಬಾರ್ಡರ್ ಸಮೀಪದ ಅಬ್ಬಾಸ್ ಕಟ್ಟಿಂಗ್ ಬಳಿ  ರಸ್ತೆಪಕ್ಕದ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. 

ಪ್ರವಾಸಕ್ಕಾಗಿ ಬಂದಿದ್ದ ಸುಮಾರು 35  ಜನರು ಬಸ್​ನಲ್ಲಿದ್ದರು. ಅಪಘಾತದ ತೀವ್ರತೆಗೆ ಬಸ್ಸಿನ ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಡ್ರೈವರ್ ಸಹಿತ ಆತನ ಹಿಂದಿದ್ದ 11 ಜನರು ಮೃತಪಟ್ಟಿದ್ದಾರೆ.

6 ಜನ ಪುರುಷರು ಮತ್ತು ಮೂವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯರು ಮತ್ತು ಪೊಲೀಸರು ಗಾಯಗಳು ಗಳನ್ನು ಆಸ್ಪತ್ರೆಗೆ ಸಾಗಿಸಿ ಬಸ್ಸನ್ನು ರಸ್ತೆ ಮೇಲಿಂದ ತೆರವುಗೊಳಿಸಲು ಶ್ರಮಿಸುತ್ತಿದ್ದಾರೆ.

 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!