ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಕಲ್ಲೂಡಿ ಬಳಿ ಭೀಕರ ಅಪಘಾತ, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

By Girish Goudar  |  First Published Nov 23, 2023, 10:18 AM IST

ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಏಳು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಏಳು ವಿದ್ಯಾರ್ಥಿಗಳ ಪೈಕಿ ಮೂವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಗೌರಿಬಿದನೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 


ಚಿಕ್ಕಬಳ್ಳಾಪುರ(ನ.23):  ಟ್ಯಾಂಕರ್ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಬಳಿ ಇಂದು(ಗುರುವಾರ) ನಡೆದಿದೆ.  ಲೋಕೇಶ್ (19), ಆಟೋ ಡ್ರೈವರ್ ಶ್ರೀನಿವಾಸ್, ವೆನ್ನೆಲಾ, ಸಹನ, ತ್ರಿವೇಣಿ, ಪವಿತ್ರ, ರೋಷಿಣಿಗೆ ತಲೆಗೆ ಗಂಭೀರವಾದ ಗಾಯವಾಗಿದೆ.  

ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಏಳು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಏಳು ವಿದ್ಯಾರ್ಥಿಗಳ ಪೈಕಿ ಮೂವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಗೌರಿಬಿದನೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Tap to resize

Latest Videos

undefined

ಪುರುಷರಿಗಿಂತ ಮಹಿಳೆಯರೇ ಬೆಸ್ಟ್‌ ಡ್ರೈವರ್ಸ್‌, ಸರ್ಕಾರದ ವರದಿ!

ಮೂವರು ವಿದ್ಯಾರ್ಥಿನಿಯರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಗೌರಿಬಿದನೂರಿನಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದೆ.  ಆಟೋದಲ್ಲಿ ಚಾಲಕ, ಇಬ್ಬರು ವಿದ್ಯಾರ್ಥಿನಿಯರು ಸೇರಿ ಎಂಟು ಜನ ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಎಂದಿನಂತೆ ವಿದ್ಯಾರ್ಥಿನಿಯರು ಕಾಲೇಜಿಗೆ ಬರುತಿದ್ದ ವೇಳೆ ಈ ಅವಘಡ ಸಂಭವಿಸಿದೆ.  ಗಾಯಗೊಂಡ ವಿದ್ಯಾರ್ಥಿನಿಯರು ದೊಡ್ಡಕುರುಗೋಡು ಗ್ರಾಮದವರಾಗಿದ್ದಾರೆ. ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 

click me!