ಬೆಳಗಾವಿಯಲ್ಲಿ 70 ಪೊಲೀಸರಿಗೆ ಕೊರೋನಾ ಸೋಂಕು

By Kannadaprabha NewsFirst Published May 26, 2021, 12:31 PM IST
Highlights

* 30 ಜನರು ಸಂಪೂರ್ಣ ಗುಣಮುಖ: ಡಿಸಿಪಿ ವಿಕ್ರಂ ಅಮಟೆ
* ಸರ್ಕಾರದ ಆದೇಶ ಜಾರಿಗೊಳಿಸುವುದು ಪೊಲೀಸರ ಕರ್ತವ್ಯ
* 40 ಜನರಿಗೆ ಹೋಮ್‌ ಐಸೋಲೇಷನ್‌ನಲ್ಲಿ ಚಿಕಿತ್ಸೆ 

ಬೆಳಗಾವಿ(ಮೇ.26): ಕೋವಿಡ್‌ 2ನೇ ಅಲೆಯಲ್ಲಿ ಬೆಳಗಾವಿ ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ 70 ಜನ ಪೊಲೀಸರಿಗೆ ಮತ್ತು ಇಬ್ಬರು ಹೋಮ್‌ ಗಾರ್ಡ್‌ಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಡಿಸಿಪಿ ಡಾ.ವಿಕ್ರಮ್‌ ಅಮಟೆ ಹೇಳಿದ್ದಾರೆ.     

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಹುತೇಕ ಸಿಬ್ಬಂದಿ ಕೋವಿಡ್‌ ಲಸಿಕೆ ಪಡೆದಿರುವುದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. 70 ಪೊಲೀಸರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಪೈಕಿ 30 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 27 ಜನರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂವರು ಇನ್ನೂ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೇ 40 ಜನರು ಹೋಮ್‌ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 

"

ಇದುವರೆಗೂ 1400 ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಲಸಿಕೆ ಪಡೆದಿದ್ದಾರೆ. ಎರಡನೇ ಡೋಸ್‌ ಅನ್ನು ಇನ್ನೂ 90 ಜನರು ತೆಗೆದುಕೊಳ್ಳಬೇಕಿದೆ. ಸುಮಾರು 45 ಜನರು ವಿವಿಧ ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಲಸಿಕೆ ಪಡೆದಿಲ್ಲ. ಶೇ.98 ರಷ್ಟು ಪೊಲೀಸರು ಲಸಿಕೆ ಪಡೆದಿದ್ದಾರೆ ಎಂದರು.

ಬೆಳಗಾವಿಯಲ್ಲಿ ಕೊರೋನಾಗೆ ವೈದ್ಯ, ತಾಯಿ ಬಲಿ

ಸೆಮಿಲಾಕ್‌ಡೌನ್‌ ಸೇರಿದಂತೆ ಸರ್ಕಾರದ ಆದೇಶವನ್ನು ಜಾರಿಗೊಳಿಸುವುದು ಪೊಲೀಸರ ಕರ್ತವ್ಯವಾಗಿದ್ದು. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಸಿಬ್ಬಂದಿ ಸೇವೆಯನ್ನು ಶಿಫ್ಟ್‌ ಮಾಡಲಾಗಿದೆ. ಪೊಲೀಸರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳು ಅರಿವು ಮೂಡಿಸುತ್ತಿದ್ದಾರೆ. ಪೊಲೀಸರಿಗೆ ಮಾಸ್ಕ್‌, ಸ್ಯಾನಿಟೈಸರ್‌, ಗ್ಲೌಸ್‌ ಸೇರಿದಂತೆ ಮತ್ತಿತರ ವಸ್ತುಗಳನ್ನು ಪೂರೈಕೆ ಮಾಡಲಾಗಿದೆ. ಯಾವರೀತಿ ತನಿಖೆ ನಡೆಸಬೇಕು? ಯಾವ ರೀತಿ ಬಂಧಿಸಬೇಕು? ವಾಹನ ಜಪ್ತಿ ಸೇರಿದಂತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಮಾಹಿತಿ ನೀಡಲಾಗಿದೆ. ಲಸಿಕೆ ಪಡೆದಿದ್ದೇವೆ ಎಂದು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಕಡ್ಡಾಯವಾಗಿ ಎಲ್ಲರೂ ಮಾಸ್ಕ್‌ ಹಾಕುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

click me!