ಚಿಕ್ಕಮಗಳೂರಿನಲ್ಲಿಂದು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿಯತಿಯಲ್ಲಿ ಜಿಲ್ಲಾಧಿಕಾರಿ ಕೆ ಎಸ್ ರಮೇಶ್ ಧ್ವಜಾರೋಹಣ ನೆರವೇರಿಸಿದರು.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು(ಜ.26): ಚಿಕ್ಕಮಗಳೂರಿನಲ್ಲಿಂದು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ನೇತಾಜಿ ಸುಭಾಶ್ಚಂದ್ರ ಭೋಸ್ ಜಿಲ್ಲಾ ಆಟದ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿಯತಿಯಲ್ಲಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಪೋಲಿಸ್ ಸಿಬ್ಬಂದಿಗಳು ಹಾಗೂ ಗೃಹರಕ್ಷಕರ ದಳದಿಂದ ಪಥಸಂಚಲನ ನಡೆಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಧ್ವಜಾರೋಹಣ ನಡೆಸಿ ಗೌರವವಂದನೆ ಸ್ವೀಕರಿಸಿದ್ರು. ಇದಕ್ಕೂ ಮೊದಲು ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿದ್ರು.
ಕುವೆಂಪು ವಿವಿಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ, ಧ್ವಜಾರೋಹಣ ನೆರವೇರಿಸಿದ
ಸಂವಿಧಾನ ಜೀವಂತ ದಾಖಲೆ : ಜಿಲ್ಲಾಧಿಕಾರಿ
ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಭಾರತದ ಸಂವಿಧಾನವು ಸ್ಥಿರವಲ್ಲ, ಆದರೆ, ಜೀವಂತ ದಾಖಲೆಯಾಗಿದೆ, ಇದನ್ನು ರಾಷ್ಟ್ರದ ಒಳಿತಿಗಾಗಿ ತಿದ್ದುಪಡಿ ಮಾಡಬಹುದು, 1950ರಿಂದ ಈವರೆಗೆ 105 ಬಾರಿ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದರು.
Republic Day: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಕಾಂಗ್ರೆಸ್ ಮುಖಂಡ: ಬದಲಿ ಧ್ವಜ ಹಾರಿಸಿ
ಭಾರತದ ವೈಶಿಷ್ಟ್ಯಗಳು ನೂರಾರು. ಶಾಂತಿ ನಮ್ಮ ಮಂತ್ರ, ಸಹನೆ ನಮ್ಮ ಶಕ್ತಿ, ಸೌಹಾರ್ದತೆ ನಮ್ಮ ಹುಟ್ಟು ಗುಣ, ಕೂಡಿ ಬಾಳುವುದು ನಮ್ಮ ಪರಂಪರೆ, ಅನೇಕತೆಯಲ್ಲಿ ಏಕತೆ ನಮ್ಮ ವಿಶೇಷ, ಸಮನ್ವಯತೆ ನಮ್ಮ ಸಹಜತೆ, ಸರ್ವಧರ್ಮ ಸಮಭಾವ ನಮ್ಮ ಶ್ರೇಷ್ಠತೆ, ಎಲ್ಲರೊಳಗೊಂದಾಗುವುದು ನಮ್ಮತನ, ಸಕಲ ಜೀವಾತ್ಮಗಳನ್ನು ಪ್ರೀತಿಸುವುದು ನಮ್ಮ ಔದಾರ್ಯ. ಅದು, ಭಾರತದ ವೈವಿದ್ಯತೆಯಲ್ಲಿ ಏಕತೆಯ ಪರಿಕಲ್ಪನೆಯನ್ನು ಪ್ರತಿಬಿಂಬಿಸುತ್ತದೆ ಎಂದರು. ಸಮಾರಂಭದಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ , ವಿಧಾನಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಸೇರಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.