ಬೆಂಗಳೂರಿನಲ್ಲಿ ಶೇ.75 ಮತದಾನದ ಗುರಿ: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

Published : Apr 05, 2023, 07:42 AM IST
ಬೆಂಗಳೂರಿನಲ್ಲಿ ಶೇ.75 ಮತದಾನದ ಗುರಿ: ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌

ಸಾರಾಂಶ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಸಂಸ್ಥೆಗಳು ಸಹಕಾರ ನೀಡಬೇಕೆಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಮನವಿ ಮಾಡಿದರು.

ಬೆಂಗಳೂರು (ಏ.05): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಸಂಸ್ಥೆಗಳು ಸಹಕಾರ ನೀಡಬೇಕೆಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಮನವಿ ಮಾಡಿದರು. ಬೊಮ್ಮನಹಳ್ಳಿ, ಕೆ.ಆರ್‌.ಪುರ, ಮಹದೇವಪುರ ಸೇರಿದಂತೆ ಇನ್ನಿತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಮತದಾನದ ಪ್ರಮಾಣ ತೀರಾ ಕಡಿಮೆ ಇರುತ್ತದೆ. 

ಹೀಗಾಗಿ ಈ ಬಾರಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕನಿಷ್ಠ ಶೇ.75ರಷ್ಟು ಮತದಾನವಾಗುವಂತೆ ಮಾಡಲು ಬೆಂಗಳೂರು ನಗರ ಜಿಲ್ಲಾ ಚುನಾವಣಾ ವಿಭಾಗ ನಿರ್ಧರಿಸಿದೆ. ಅದಕ್ಕಾಗಿ ಈಗಾಗಲೇ ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮತದಾನ ಮಾಡಲು ಆಕರ್ಷಿಸಲು ಐಕಾನ್ಸ್‌ಗಳನ್ನು ನೇಮಿಸಲಾಗಿದೆ. ಬೀದಿ ನಾಟಕ, ಮಾಧ್ಯಮಗಳ ಮೂಲಕ ಪ್ರಚಾರವನ್ನೂ ನಡೆಸಲಾಗುತ್ತಿದೆ ಎಂದು ಹೇಳಿದರು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 95,13,830 ಮತದಾರರಿದ್ದರೂ ಮತದಾನದ ಪ್ರಮಾಣ ಮಾತ್ರ ಶೇ.55ದಾಟುವುದಿಲ್ಲ. 

ಆಟೋ ಮೇಲೆ ಪಕ್ಷಗಳ ಸ್ಟಿಕ್ಕರ್‌, ಬ್ಯಾನರ್‌ ಇದ್ದರೆ ಕೇಸ್‌: ಈವರೆಗೂ 450ಕ್ಕೂ ಹೆಚ್ಚು ಪ್ರಕರಣ ದಾಖಲು

ಈ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಮತದಾನದ ಮಹತ್ವದ ಜತೆಗೆ ಮತಗಟ್ಟೆಬಳಿ ಯಿರುವ ಸೌಲಭ್ಯಗಳ ಬಗ್ಗೆ ಜನರಿಗೆ ತಿಳಿಸಬೇಕಿದೆ. 80 ವರ್ಷ ಮೇಲ್ಪಟ್ಟಹಾಗೂ ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಮತ ಚಲಾಯಿಸ ಬೇಕು ಎಂದು ತಿಳಿಸಿದರು. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂಗಪ್ಪ, ಸ್ವೀಪ್‌ ನೋಡೆಲ್‌ ಅಧಿಕಾರಿ ಸಿದ್ದೇಶ್ವರ, ವಲಯ ಜಂಟಿ ಆಯುಕ್ತ ಕೃಷ್ಣಮೂರ್ತಿ ಇತರರಿದ್ದರು.

ಹೊಸ ಕಾಮಗಾರಿ ಆರಂಭಿಸಲ್ಲ: ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಕೊಳ್ಳುವುದಿಲ್ಲ. ಈಗಾಗಲೇ ಕಾರ್ಯಾದೇಶ ನೀಡಿದ ಕೆಲಸ ಆರಂಭವಾದ ಕಾಮಗಾರಿಗಳನ್ನಷ್ಟೇ ಮಾಡಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಕಾಮಗಾರಿಗಳ ಅಂದಾಜು ವೆಚ್ಚ ಮೇಲಾಧಿಕಾರಿಗಳಿಂದ ಒಪ್ಪಿಗೆ ಪಡೆದು ಅನುಷ್ಠಾನ ಮಾಡುವ ಹಿನ್ನೆಲೆಯಲ್ಲಿ ಅವರನ್ನೇ ಚುನಾವಣಾ ನೀತಿ ಸಂಹಿತೆ ಮೇಲ್ವಿಚಾರಣೆಗೆ ವಹಿಸದೆ ಪ್ರತ್ಯೇಕವಾಗಿ ಕೆಎಎಸ್‌ ಅಧಿಕಾರಿಗಳನ್ನು ನೇಮಿಸಲಾಗುತ್ತದೆ. ಹೀಗಾಗಿ ಬಹಳ ಕನಿಷ್ಠ ಪ್ರಮಾಣದಲ್ಲಿ ಪಾಲಿಕೆ ಎಂಜಿನಿಯರ್‌ಗಳನ್ನು ಸಾಮಾನ್ಯ ಚುನಾವಣಾ ಕೆಲಸಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದರು.

ಕದ್ದ ಚಿನ್ನಾಭರಣ ಧರಿಸಿ ರೀಲ್ಸ್ ಮಾಡುತ್ತಿದ್ದ ಮುಂಬೈ ಖದೀಮರಿಬ್ಬರ ಬಂಧನ

ಪ್ರತಿ ದಿನ ಬೆಳಗ್ಗೆ ಎಂಜಿನಿಯರ್‌ಗಳು ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ, ಅಳತೆ ಪುಸ್ತಕದಲ್ಲಿ ಅದನ್ನು ದಾಖಲಿಸಿ ನಂತರ ಚುನಾವಣಾ ಕೆಲಸಗಳಿಗೆ ಬರುತ್ತಾರೆ. ನಗರದಲ್ಲಿ ಹಾಕಿರುವ ಬ್ಯಾನರ್‌, ಬಂಟಿಂಗ್‌್ಸ, ಫ್ಲೆಕ್ಸ್‌ಗಳನ್ನು ತೆಗೆಯಲು ಎಂಜಿನಿಯರ್‌ಗಳು ತಮ್ಮ ಬಳಿಯಿರುವ ಸಿಬ್ಬಂದಿಯನ್ನು ಬಳಸಿಕೊಳ್ಳಬಹುದು. ಹೀಗಾಗಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಗರದಲ್ಲಿನ ಬೃಹತ್‌ ನೀರುಗಾಲುವೆ ವಿಭಾಗದಲ್ಲಿ ಮಳೆಗಾಲ ಸಮೀಪಿಸುತ್ತಿರುವ ಕಾರಣ ಇಲ್ಲಿನ ರಾಜಕಾಲುವೆ ನಿರ್ಮಾಣ ಕೆಲಸಗಳು, ಮಳೆ ನೀರು ಹರಿಯುವಿಕೆಗೆ ತೊಂದರೆಯಾಗದಂತೆ ಕಾಮಗಾರಿಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

PREV
Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!