ಬೆಂಗ್ಳೂರಲ್ಲಿ ಈ ಬಾರಿ 75% ಮತದಾನ ಗುರಿ: ತುಷಾರ್‌ ಗಿರಿನಾಥ್‌

By Kannadaprabha News  |  First Published Apr 25, 2023, 9:21 AM IST

ಪ್ರಜಾಪ್ರಭುತ್ವ ಗಟ್ಟಿಯಾಗಲು ಮತ ಹಾಕಿ, ನೀವೂ ಮತ ಹಾಕಿ, ಮನೆಯವರಿಂದಲೂ ಮತದಾನ ಮಾಡಿಸಿ, ವಿಜಯ ಕಾಲೇಜಿನಲ್ಲಿ ಯುವ ಮತದಾರರಿಗೆ ಮತ ಜಾಗೃತಿ. 


ಬೆಂಗಳೂರು(ಏ.25):  ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟುಗಟ್ಟಿಗೊಳಿಸಲು ಪ್ರತಿಯೊಬ್ಬ ಯುವ ಮತದಾರರು ಮೇ 10ರಂದು ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ಜಯನಗರದ 4ನೇ ಬ್ಲಾಕ್‌ನಲ್ಲಿರುವ ವಿಜಯ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.

Tap to resize

Latest Videos

ಬೆಂಗಳೂರು: ಗುತ್ತಿಗೆದಾರರಿಗೆ ಬಿಬಿಎಂಪಿ ಅಡ್ವಾನ್ಸ್‌ ಪೇಮೆಂಟ್‌..!

ಮೊದಲನೇ ಬಾರಿ ಮತ ಚಲಾಯಿಸುವವರಲ್ಲಿ ಮತದಾನ ಮಾಡಬೇಕೆಂಬ ಉತ್ಸಾಹ ಸಾಕಷ್ಟಿರಲಿದ್ದು, ತಾವು ಮತದಾನ ಮಾಡುವ ಜೊತೆಗೆ ಬೇರೆಯವರಿಂದಲೂ ಮತದಾನ ಮಾಡಿಸಬೇಕು. ಮೊದಲ ಬಾರಿ ಮತದಾನ ಮಾಡುತ್ತಿರುವ ಯುವ ಮತದಾರರೆಲ್ಲರೂ ರಾಯಭಾರಿಗಳಾಗಿ ತಮ್ಮ ಮನೆಯವರಿಂದ ಮಾತ್ರವಲ್ಲ ನೆರೆಹೊರೆಯ ಮನೆಗಳ ಮತದಾರರಲ್ಲಿಯೂ ಮತದಾನದ ಬಗ್ಗೆ ಅರಿವು ಮೂಡಿಸಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು ನಗರದಲ್ಲಿ ಶೇ.52ರಷ್ಟು ಮಾತ್ರ ಮತದಾನವಾಗುತ್ತಿದ್ದು, ಅದನ್ನು ಶೇ.75ಕ್ಕೆ ಹೆಚ್ಚಿಸಲು ಭಾರತ ಚುನಾವಣಾ ಆಯೋಗ, ಬಿಬಿಎಂಪಿ ವತಿಯಿಂದ ಸಾಕಷ್ಟುಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಯುವ ಮತದಾರರು ತಮ್ಮ ವಿವೇಚನೆ ಹಾಗೂ ಮಾನದಂಡದ ಪ್ರಕಾರ ಸರಿಯಾದ ಅಭ್ಯರ್ಥಿಗೆ ಮತದಾನ ಮಾಡಿ. ಒಂದು ಮತವನ್ನು ಕೂಡಾ ನಾವು ಕಡೆಗಣಿಸುವಂತಿಲ್ಲ. ಆದ್ದರಿಂದ ಎಲ್ಲರೂ ತಮ್ಮ-ತಮ್ಮ ಜವಾಬ್ದಾರಿಯನ್ನು ಅರಿತು ಮತದಾನ ಮಾಡಲು ತಿಳಿಸಿದರು.

ಸಂಹಿತೆ ಉಲ್ಲಂಘಿಸಿದರೆ ದೂರು ದಾಖಲಿಸಿ

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀವು ವಾಸಿಸುವ ಸ್ಥಳದಲ್ಲಿ ಏನಾದರೂ ಅಕ್ರಮ ಅಥವಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಿವಿಜಿಲ್‌ ತಂತ್ರಾಂಶದಲ್ಲಿ ಭಾವಚಿತ್ರ ಹಾಗೂ ವಿಡಿಯೋ ಮೂಲಕ ದೂರು ದಾಖಲಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತುಷಾರ್‌ ಗಿರಿನಾಥ್‌ ಹೇಳಿದರು.

ದಕ್ಷಿಣ ವಲಯ ಆಯುಕ್ತ ಜಯರಾಮ್‌ ರಾಯಪುರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಎಲ್ಲರೂ ಯೋಚಿಸಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಉತ್ತಮ ಸಮಾಜ ಕಟ್ಟಲು ಸಾಧ್ಯ. ಸರಿಯಾದ ದಿಕ್ಕಿನಲ್ಲಿ ನಡೆಸುವಂತಹ ಅಭ್ಯರ್ಥಿಯನ್ನು ನಾವು ಆಯ್ಕೆ ಮಾಡಬೇಕಿದೆ. ಅದು ಸಾಧ್ಯವಾಗಬೇಕಾದರೆ ಎಲ್ಲರೂ ತಪ್ಪದೆ ಮತದಾನ ಚಲಾಯಿಸಬೇಕು. ಹಣ ಅಥವಾ ಬೇರೆ ಆಮೀಷಗಳಿಗೆ ಒಳಗಾಗದೆ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಲು ಮತ ಹಾಕಬೇಕು ಎಂದು ತಿಳಿಸಿದರು.

ಕಾಂಗ್ರೆಸ್‌ ಶಾಸಕರಿಗೆ ಮುಳುವಾದ ಬಿಬಿಎಂಪಿ ಚುನಾವಣೆ ಮುಂದೂಡಿಕೆ

ಕಾರ್ಯಕ್ರಮದಲ್ಲಿ ಸ್ವೀಪ್‌ ಸಮಿತಿ ಅಧ್ಯಕ್ಷ ಸಂಗಪ್ಪ, ವಲಯ ಜಂಟಿ ಆಯುಕ್ತ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ. ಜಗದೀಶ್‌ ಕೆ.ನಾಯಕ್‌, ಸ್ವೀಪ್‌ ನೋಡಲ್‌ ಅಧಿಕಾರಿ ಸಿದ್ದೇಶ್ವರ, ಉಪ ಅಯುಕ್ತೆ ಲಕ್ಷ್ಮೇದೇವಿ, ವಿಜಯ ಕಾಲೇಜು ಪ್ರಾಂಶುಪಾಲ ಉಪಸ್ಥಿತರಿದ್ದರು.

ನಾಟಕ ಪ್ರದರ್ಶನ

ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ನಾಟಕ ತಂಡವು ‘ಮತದಾನ ಸಂಕಲ್ಪ’ ಎಂಬ ನಾಟಕ ಪ್ರದರ್ಶಿಸಿತು. ಇದೇ ವೇಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತದಾನದ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಿದರು.

click me!