ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 44 ವಿದ್ಯಾರ್ಥಿಗಳ ವಸತಿ ನಿಲಯ ಹಾಗೂ 54 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒಟ್ಟು 784 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಬೆಂಗಳೂರು(ಏ.17): ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 44 ವಿದ್ಯಾರ್ಥಿಗಳ ವಸತಿ ನಿಲಯ ಹಾಗೂ 54 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಒಟ್ಟು 784 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ನಗರದ ಎಂ.ಜಿ.ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ಕ್ವಾರಂಟೈನ್‌ನಲ್ಲಿರುವವರನ್ನು ಭೇಟಿ ಮಾಡಿದ ಅವರು ‘ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ನಿರಾಶ್ರಿತರು, ಕೂಲಿ ಕಾರ್ಮಿಕರು ಸೇರಿ ಒಟ್ಟು 5,108 ಜನರಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.ಯಾರೂ ಅನ್ನ, ನೀರು ಇಲ್ಲದೆ ಬಳಲಬಾರದೆಂಬ ಆಶಯದಿಂದ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ’ ಎಂದರು.
ದೇಶದಲ್ಲೇ ಮೊದಲ ಬಾರಿ ಆನ್‌ಲೈನ್‌ನಲ್ಲಿ BBMP ಬಜೆಟ್
ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್ ನೇತೃತ್ವದಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಕ್ರಮಕೈಗೊಳ್ಳುತ್ತಿದ್ದಾರೆ. ಊಟ ಮತ್ತು ವಸತಿ ತೊಂದರೆ ಎದುರಿಸುತ್ತಿರುವ ಅಸಂಘಟಿತ ಕಾರ್ಮಿಕರು ಮತ್ತು ಹೊರ ರಾಜ್ಯದಿಂದ ಇಲ್ಲಿಗೆ ಬಂದು ನಿರಾಶ್ರಿತರಾಗಿದ್ದಲ್ಲಿ ಆಶ್ರಯ ಪಡೆಯಲು ಇಲಾಖೆ ಪ್ರಧಾನ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದರು.
ಇಂದು ನಿಖಿಲ್ - ರೇವತಿ ಸರಳ ವಿವಾಹ: ಮುಖ್ಯದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್
ವಸತಿ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ ಪ್ರತಿನಿತ್ಯ ತಿಂಡಿ, ಊಟ ನೀಡಿ, ಆರೈಕೆ ಮಾಡಲಾಗುತ್ತಿದೆ. ಸೂಕ್ತ ವಸತಿ, ಸ್ನಾನ ಗೃಹದ ಸೌಲಭ್ಯ ಒದಗಿಸಿ, ಸಾಬೂನು ಸೇರಿದಂತೆ ಮೂಲ ಸೌಕರ್ಯಗಳನ್ನು ನೀಡಲಾಗುತ್ತಿದೆ. ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ವೈದ್ಯಾಧಿಕಾರಿಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಸಚಿವರ ಆಪ್ತ ಕಾರ್ಯದರ್ಶಿ ವಿ. ಶ್ರೀನಿವಾಸ ಉಪಸ್ಥಿತರಿದ್ದರು.