ಒಂದೇ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಎಂಟು ಜನ ಪ್ರಯಾಣಿಕರು ಲೋಂಡಾ ನಿಲ್ದಾಣ ಬಿಟ್ಟ ನಂತರ ಅವರೆಲ್ಲರೂ ಒಂದೆರಡು ಬಾರಿ ವಾಂತಿ ಮಾಡಿಕೊಂಡಿದ್ದಾರೆ. ಬಳಿಕ ಮಲಗಿದವರು ಏಳಲೇ ಇಲ್ಲ. ಎಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಬೆಳಗಾವಿ ರೈಲ್ವೆ ಪೊಲೀಸರು ಅಸ್ವಸ್ಥಗೊಂಡಿದ್ದ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ, 8 ಜನರ ಪೈಕಿ ಇಬ್ಬರಿಗೆ ಮಾತ್ರ ಪ್ರಜ್ಞೆ ಬಂದಿದೆ. ಉಳಿದ 6 ಜನ ಪ್ರಯಾಣಿಕರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಬೆಳಗಾವಿ(ಸೆ.13): ಅಪರಿಚಿತರು ನೀಡಿದ ಆಹಾರ ಸೇವಿಸಿ ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ವಾಸ್ಕೋ -ನಿಜಾಮುದ್ದೀನ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶದ ಎಂಟು ಪ್ರಯಾಣಿಕರು ಪ್ರಜ್ಞಾಹೀನರಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸದ್ಯ ಅನಾರೋಗ್ಯವಾಗಿರುವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಎಂಟು ಜನ ಪ್ರಯಾಣಿಕರು ಲೋಂಡಾ ನಿಲ್ದಾಣ ಬಿಟ್ಟ ನಂತರ ಅವರೆಲ್ಲರೂ ಒಂದೆರಡು ಬಾರಿ ವಾಂತಿ ಮಾಡಿಕೊಂಡಿದ್ದಾರೆ. ಬಳಿಕ ಮಲಗಿದವರು ಏಳಲೇ ಇಲ್ಲ. ಎಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಬೆಳಗಾವಿ ರೈಲ್ವೆ ಪೊಲೀಸರು ಅಸ್ವಸ್ಥಗೊಂಡಿದ್ದ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ, 8 ಜನರ ಪೈಕಿ ಇಬ್ಬರಿಗೆ ಮಾತ್ರ ಪ್ರಜ್ಞೆ ಬಂದಿದೆ. ಉಳಿದ 6 ಜನ ಪ್ರಯಾಣಿಕರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ಗಣೇಶ ಹಬ್ಬದ ಪ್ರಯುಕ್ತ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ, ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ಗೋವಾದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇವರೆಲ್ಲರೂ 25 ವಯಸ್ಸಿನೊಳಗಿನವರು. ರಜೆ ಪಡೆದು ದೆಹಲಿ ಬಳಿಯಿರುವ ಮಧ್ಯ ಪ್ರದೇಶದ ಗಡಿಯಲ್ಲಿರುವ ಖಂಡ್ವಾ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಪ್ರಯಾಣಿಕರ ಸೋಗಿನಲ್ಲಿ ಬಂದ ಅಪರಿಚಿತರು ನೀಡಿದ ಚಾಕೋಲೇಟ್, ಚಿಪ್ಸ್ ಮತ್ತಿತರ ತಿಂಡಿಯಿರುವ ಪಾಕೆಟ್ ಪಡೆದು ತಿಂದ ತಕ್ಷಣವೇ ಪ್ರಜ್ಞೆ ಕಳೆದುಕೊಂಡಿದ್ದಾರೆ. ಅವರಲ್ಲಿದ್ದ ಹಣ ದೋಚಿಕೊಳ್ಳುವ ಉದ್ದೇಶಿದಿಂದ ಅಪರಿಚಿತರು ಇದನ್ನು ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸೋಮವಾರ ರಾತ್ರಿ 8.30ಕ್ಕೆ ರೈಲು ಬೆಳಗಾವಿ ನಿಲ್ದಾಣಕ್ಕೆ ಬಂದ ವೇಳೆ ಪ್ರಯಾಣಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಪ್ರಜಾಹೀನ ಸ್ಥಿತಿಯಲ್ಲಿದ್ದ 8 ಜನ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ; ಮಹೇಶ ಕುಮಟಳ್ಳಿ ಕಿಡಿ
ಬೆಳಗಾವಿ ರೈಲ್ವೆ ಪೊಲೀಸರು ವಾಸ್ಕೋ ರೈಲ್ವೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು ಅವರು ರೈಲು ನಿಲ್ದಾಣದಲ್ಲಿರುವ ಸಿಸಿಟಿವಿ ದೃಶ್ಯ ವೀಕ್ಷಿಸುತ್ತಿದ್ದಾರೆ. ಆರೋಪಿಗಳು ಈ ಎಂಟೂ ಜನರನ್ನು ಹಿಂಬಾಲಿಸಿ ಬಂದು ಪ್ರಯಾಣಿಕರಂತೆ ರೈಲು ಹತ್ತಿ ಅವರನ್ನು ಲೂಟಿ ಮಾಡುವ ಉದ್ದೇಶ ಹೊಂದಿರಬಹುದು. ಆದರೆ ಬೋಗಿಯು ಪ್ರಯಾಣಿಕರಿಂದ ತುಂಬಿದ್ದರಿಂದ ಅವರಿಗೆ ಅದು ಸಾಧ್ಯವಾಗಿಲ್ಲ. ಅವರೆಲ್ಲರ ಹಣ ಮತ್ತು ಇತರೆ ವಸ್ತುಗಳು ಸುರಕ್ಷಿತವಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರ ಪೈಕಿ ಇಬ್ಬರಿಗೆ ಪ್ರಜ್ಞೆ ಬಂದಿದೆ. ಆರು ಜನ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪೂರ್ಣ ಪ್ರಜ್ಞೆ ಬಂದ ನಂತರ ಆಸ್ಪತ್ರೆ ಅನುಮತಿ ಪಡೆದು ವಿಚಾರಣೆ ನಡೆಸಲಾಗುವುದು ಎಂದು ರೈಲ್ವೆ ಪೊಲೀಸ್ ಠಾಣೆ ಇನ್ಸಪೆಕ್ಟರ್ ವೆಂಕಟೇಶ ತಿಳಿಸಿದ್ದಾರೆ.