ಕಾರವಾರ: ದೋಣಿ ಮುಳುಗಿ 8 ಮಂದಿ ದುರ್ಮರಣ

Published : Jan 21, 2019, 04:20 PM ISTUpdated : Jan 21, 2019, 04:38 PM IST
ಕಾರವಾರ: ದೋಣಿ ಮುಳುಗಿ 8 ಮಂದಿ ದುರ್ಮರಣ

ಸಾರಾಂಶ

ಕರ್ನಾಟಕದ ರತ್ನ ತುಮಕೂರಿನ ಸಿದ್ಧಗಂಗಾ ಶ್ರೀಗಳ ಅಗಲಿಕೆಗೆ ಇಡೀ ರಾಜ್ಯವೇ ಕಣ್ಣೀರು ಸುರಿಸುತ್ತಿದೆ. ಇದರ ಬೆನ್ನಲ್ಲೇ ಕಾರವಾರದಲ್ಲಿ ದೊಡ್ಡ ದುರಂತವೇ ಸಂಭವಿಸಿದೆ.

ಕಾರವಾರ, (ಜ.21): ಕೂರ್ಮಗಡದ ನರಸಿಂಹ ಜಾತ್ರೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 8 ಮಂದಿ ಮೃತಪಟ್ಟಿದ್ದಾರೆ.

ದೋಣಿಯಲ್ಲಿ ಸುಮಾರು 22 ಜನರಿದ್ದರು ಎನ್ನಲಾಗಿದೆ. ಇವರೆಲ್ಲ ಕೂರ್ಮಗಡ ಜಾತ್ರೆಗೆ ಹೋಗಿ ವಾಪಸ್​ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ದುರಂತದಲ್ಲಿ ಮೃತಪಟ್ಟ ಎಂಟು  ಮೃತದೇಹಗಳನ್ನು ಈಗಾಗಲೇ ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆದಿದೆ. 

ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಮೀನುಗಾರರು ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ನಕುಲ್​ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೂರ್ಮಗಡ ಒಂದು ಅರಬ್ಬಿ ಸಮುದ್ರದ ದ್ವೀಪವಾಗಿದ್ದು, ಕಾರವಾರದಿಂದ ಸುಮಾರು ಮೂರು ಕಿ.ಮೀ.ದೂರದಲ್ಲಿದೆ.

PREV
click me!

Recommended Stories

ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!
Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!