ಶಿವಮೊಗ್ಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ಸೋಂಕು ತೀವ್ರವಾಗಿ ಹರಡುತ್ತಿದೆ. ಇದೀಗ ಮತ್ತೆ 8 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಶಿವಮೊಗ್ಗ [ಜ.14] : ಜಿಲ್ಲೆಯಲ್ಲಿ ಮಂಗನ ಕಾಯಿಲೆ(ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್‌ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ ತೊಡಗಿದ್ದು, ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೆ ಐವರಲ್ಲಿ ಸೋಂಕು ಪತ್ತೆಯಾಗಿದೆ.
ಈಗಾಗಲೇ ಸಾಗರದಲ್ಲಿ ಇಬ್ಬರು ಹಾಗೂ ತೀರ್ಥಹಳ್ಳಿಯಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 8 ಮಂದಿಗೆ ಸೋಂಕು ತಗುಲಿರುವುದು ಖಚಿತಗೊಂಡಿದೆ. ವರ್ಷದ ಆರಂಭದಲ್ಲೇ ಈ ಕಾಯಿಲೆ ಮೊದಲ ಬಲಿ ಪಡೆದಿದ್ದು, ಮಲೆನಾಡು ಭಾಗದಲ್ಲಿ ಆತಂಕ ಸೃಷ್ಟಿಸಿದೆ.
ಮತ್ತೆ ಕಾಣಿಸಿಕೊಂಡಿದೆ ಮಹಾಮಾರಿ ಮಂಗನ ಕಾಯಿಲೆ : ಎಚ್ಚರ!...
ಇನ್ನು ತೀವ್ರ ಜ್ವರ ಹಾಗೂ ಬಳಲಿಕೆಯಿಂದ ಬಳಲುತ್ತಿದ್ದ ಸಾಗರ ತಾಲೂಕಿನ ಅರಳಗೋಡು ಸಮೀಪದ ಹೆಗರೆ ಗ್ರಾಮದ ಜ್ಯೋತಿ ಎಂಬುವರು ಮಂಗನ ಕಾಯಿಲೆ (ಕೆಎಫ್‌ಡಿ) ಶಂಕೆ ಹಿನ್ನೆಲೆಯಲ್ಲಿ ಸೋಮವಾರ ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗ : ಮಂಗನ ಕಾಯಿಲೆಗೆ ಮಹಿಳೆ ಬಲಿ.
ಜ್ಯೋತಿ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದು, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.