ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರಿಗಾಗಿ 8 ಸಾವಿರ ಕೋಟಿ ರು. ಅನುದಾನವಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ತಿಳಿಸಿದರು.
ಹೊಸಕೋಟೆ (ಅ.24): ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರಿಗಾಗಿ 8 ಸಾವಿರ ಕೋಟಿ ರು. ಅನುದಾನವಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ತಿಳಿಸಿದರು.
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (Labors) ಕಲ್ಯಾಣ ಮಂಡಳಿ ಹಾಗೂ ಪಟಾಲಮ್ಮ ದೇವಿ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ಇಲಾಖೆಯ ನೋಂದಾಯಿತ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರದಲ್ಲಿ ಕಾರ್ಮಿಕರಿಗಾಗಿ ಅನೇಕ ಸವಲತ್ತುಗಳಿವೆ. ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಅಸ್ತಿತ್ವಕ್ಕೆ ಬಂದಿರು ಸಂಘಟನೆಗಳು ಕಾರ್ಮಿಕರಿಗೆ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು ಎಂದು ಹೇಳಿದರು.
undefined
ಪಟಾಲಮ್ಮ ದೇವಿ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘದ ಅಧ್ಯಕ್ಷ ರಾಮಾಂಜಿನಿ ಮಾತನಾಡಿ, ರಾಜ್ಯದಲ್ಲಿ ಕಾರ್ಮಿಕರು ಸವಲತ್ತುಗಳನ್ನು ಪಡೆಯದ ಹಿನ್ನೆಲೆಯಲ್ಲಿ ಅನುದಾನ ಸರ್ಕಾರಕ್ಕೆ ವಾಪಸ್ ಹೋಗುತ್ತಿದೆ. ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲು ಸಂಘಟನೆಗಳನ್ನು ರಚಿಸಲಾಗಿದೆ. ಅಧಿಕಾರಿಗಳು ಕೂಡ ಕಾರ್ಮಿಕರಿಗೆ ಸರ್ಕಾರದಿಂದ ಬರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಇಲಾಖೆ ಅಧಿಕಾರಿಗಳು ಕಾರ್ಮಿಕರ ಅನುದಾನವನ್ನು ಅವರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಮನೆ ನಿರ್ಮಾಣ, ಅಪಘಾತ ವಿಮೆ ಸೇರಿದಂತೆ ಅನೇಕ ಸವಲತ್ತುಗಳನ್ನು ವಿತರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದÜರ್ಭದಲ್ಲಿ ಕಾರ್ಮಿಕರಿಗೆ 1 ಸಾವಿರ ಇಮ್ಯೂನಿಟಿ ಬೂಸ್ಟರ್ ಕಿಟ್, 300 ಕಾರ್ಪೆಂಟರ್ ಕಿಟ್ , 500 ಮೇಸಿನ್ ಕಿಟ್, 200 ಎಲೆಕ್ಟ್ರಿಷಿಯನ್ ಕಿಟ್, 100 ಪ್ಲಂಬಿಂಗ್ ಕಿಟ್, 200 ಬಾರ್ ಬೆಂಡಿಂಗ್ ಕಿಟ್‌ಗಳನ್ನು ವಿತರಿಸಲಾಯಿತು.
ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ನಗರಸಭೆ ಅಧ್ಯಕ್ಷ ಡಿ.ಕೆ.ನಾಗರಾಜ್, ಸಂಘಟನೆ ಉಪಾಧ್ಯಕ್ಷ ಮುನಿಯಪ್ಪ, ಕಾರ್ಯದರ್ಶಿ ಮೃತ್ಯುಂಜಯ, ಪದಾಧಿಕಾರಿಗಳಾದ ಹರಳೂರು ರಘು, ರವಿ, ಗೋವಿಂದ್ ದಂಡುಪಾಳ್ಯ, ಚಂದ್ರು, ನಾಗರಾಜ್ ಎಚ್‌ಬಿಟಿ, ಪೆಯಿಂಟರ್ ನಾರಾಯಣಪ್ಪ ಇತರರಿದ್ದರು.
ಉಚಿತ ಬಸ್ ಪಾಸ್
ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮಹಾ ನಗರ ಸಾರಿಗೆ ಬಸ್‌ಗಳಲ್ಲಿ ಕಲ್ಪಿಸಲಾಗಿದ್ದ ರಿಯಾಯಿತಿ ಬಸ್‌ಪಾಸ್ ಸೌಲಭ್ಯ ಇದೀಗ ರಾಜ್ಯಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು ಇ-ಆಡಳಿತ ಅಭಿವೃದ್ಧಿಪಡಿಸಿರುವ ತಂತ್ರಾಂಶ ಮೂಲಕ ಬಸ್‌ಪಾಸ್ ವಿತರಣೆ ಆಗಲಿದೆ. ರಾಜ್ಯ ರಸ್ತೆ ಸಾರಿಗೆ ನಿಗಮ ಹೊರಡಿಸಿರುವ ಸುತ್ತೋಲೆ ಅನ್ವಯ ನೋಂದಾಯಿತ ಅರ್ಹ ಕಟ್ಟಡ ಹಾಗೂ ಇತರೇ ನಿರ್ಮಾಣ ಕಾರ್ಮಿಕರು ಬಸ್‌ಪಾಸ್ ಪಡೆಯಲು ಬೆಂಗಳೂರು-ಒನ್, ಕರ್ನಾಟಕ-ಒನ್ ಹಾಗೂ ಗ್ರಾಮ-ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಚ್ ಕಾರ್ಡ್ ಮಾದರಿಯ ಬಸ್‌ಪಾಸ್‌ಗಳನ್ನು ಪಡೆಯಬಹುದಾಗಿದೆ.
Free Bus Pass: ಮಹಿಳಾ ಸಿಬ್ಬಂದಿಗೆ ಉಚಿತ ಬಸ್ ಪಾಸ್ ಕೊಡಿಸಲು ಗಾರ್ಮೆಂಟ್ಸ್ ನಿರ್ಲಕ್ಷ್ಯ
ಬಸ್ ಪ್ರಯಾಣ ಉಚಿತ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಹೋದರ ಸಂಸ್ಥೆಗಳಾದ ವಾಕರಸಾ ಸಂಸ್ಥೆ, ಕಕರಸಾ ನಿಗಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಸ ಇರುವ ನೋಂದಾಯಿತ ಕಟ್ಟಡ ಮತ್ತ ಇತರೇ ನಿರ್ಮಾಣ ಕಾರ್ಮಿಕರಿಗೆ ಉಚಿತ ಪ್ರಯಾಣ ಬಸ್‌ಪಾಸ್ ವಿತರಣೆ ಆಗಲಿದೆ. ವಿಶೇಷವೆಂದರೆ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿ ಆಗಿದ್ದರೂ ಅವರು ಇಚ್ಛಿಸುವ ಪ್ರಾರಂಭಿಕ ಸ್ಥಳದಿಂದ 7 ಹಂತಗಳ ಒಟ್ಟು (ಗರಿಷ್ಠ 45 ಕಿ.ಮೀ ) ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಕಟ್ಟಡ ಕಾರ್ಮಿಕರು ಉಚಿತ ಬಸ್‌ಪಾಸ್ ಪ್ರಯಾಣವನ್ನು ಕೇವಲ ನಗರ, ಸಾಮಾನ್ಯ ಹಾಗು ವೇಗದೂತ ಬಸ್‌ಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಪಾಸ್ ಅನ್ನು ಮೂರು ತಿಂಗಳಗೊಮ್ಮೆ ಕಾರ್ಮಿಕರು ನವೀಕರಿಸಿಕೊಳ್ಳುವುದು ಕಡ್ಡಾಯ. ಮರು ಅವಧಿಗೆ ಹೊಸದಾಗಿ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮೂಲಕ ಪಾಸ್ ಪಡೆಯಲು ಅವಕಾಶ ಕಲ್ಪಿಸಿದೆ.
ಪ್ರಯಾಣಕ್ಕೆ 45 ಕಿಮೀ ನಿಗದಿ:
ಕಾರ್ಮಿಕರ ಉಚಿತ ಬಸ್‌ಪಾಸ್ ವಿತರಣೆ, ನಿರ್ವಹಣೆ ಹಾಗೂ ಪಾಸಿನ ನವೀಕರಣ ಕೆಲಸವನ್ನು ರಾಜ್ಯದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯೆ ನಿರ್ವಹಿಸಲಿದೆ. ಒಮ್ಮೆ ಕಾರ್ಮಿಕರು ಬಸ್‌ಪಾಸ್ ಕಳೆದುಕೊಂಡರೆ ಕರ್ನಾಟಕ ಒನ್‌ಗೆ ತೆರಳಿ ಮನವಿ ಸಲ್ಲಿಸಿದರೆ ಸ್ಮಾರ್ಚ್‌ಕಾರ್ಡ್‌ನ ಮುದ್ರಣ ವೆಚ್ಚ ಪಡೆದು ಕಾರ್ಡ್ ವಿತರಿಸಲಿದೆ. ಬಸ್ ಪ್ರಯಾಣ ಗರಿಷ್ಠ 45 ಕಿ.ಮೀ ಮಿರಿದರೆ ಕಾರ್ಮಿಕರು ಕಡ್ಡಾಯವಾಗಿ ಟಿಕೆಟ್ ಖರೀದಿಸಿ ಪ್ರಯಾಣಿಸಬೇಕಿದೆ.