ಬೆಳಗಾವಿ ಬಳಿ ಭೀಕರ ಅಪಘಾತ: ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ

Published : Jun 26, 2022, 10:38 AM ISTUpdated : Jun 26, 2022, 02:54 PM IST
ಬೆಳಗಾವಿ ಬಳಿ ಭೀಕರ ಅಪಘಾತ: ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ

ಸಾರಾಂಶ

*   ಬೆಳಗಾವಿ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದ ಘಟನೆ  *   ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕ್ರೂಸರ್ ವಾಹನ *   ಮೃತರರು ಬೆಳಗಾವಿ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು   

ಬೆಳಗಾವಿ(ಜೂ.26):  ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ಇಂದು(ಭಾನುವಾರ) ನಡೆದಿದೆ. 

ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

ವಿಜಯಪುರ: ಬೈಕ್‌-ಬುಲೆರೋ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕ್ರೂಸರ್‌ ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

PREV
Read more Articles on
click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ