ಉಡುಪಿ: 2ನೇ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 803 ಮಂದಿ ಗೈರು

Kannadaprabha News   | Asianet News
Published : Jun 28, 2020, 08:06 AM IST
ಉಡುಪಿ: 2ನೇ ದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 803 ಮಂದಿ ಗೈರು

ಸಾರಾಂಶ

ಶನಿವಾರ ಎಸ್‌ಎಸ್‌ಎಲ್‌ಸಿಯ ಗಣಿತ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ, ಜಿಲ್ಲಾಡಳಿತದ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸುವ್ಯವಸ್ಥಿತವಾಗಿ ಶಾಂತಿಯುತವಾಗಿ ನಡೆದಿದೆ. ಆದರೆ ಈ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ 803 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಉಡುಪಿ(ಜೂ.28): ಶನಿವಾರ ಎಸ್‌ಎಸ್‌ಎಲ್‌ಸಿಯ ಗಣಿತ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ, ಜಿಲ್ಲಾಡಳಿತದ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸುವ್ಯವಸ್ಥಿತವಾಗಿ ಶಾಂತಿಯುತವಾಗಿ ನಡೆದಿದೆ. ಆದರೆ ಈ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ 803 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಒಟ್ಟು 13884 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿತ್ತು, 13081 ಮಾತ್ರ ಪರೀಕ್ಷೆ ಬರೆದಿದ್ದಾರೆ.

ಹೊರ ಜಿಲ್ಲೆಗಳಿಂದ ಬಂದ ಎಲ್ಲಾ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜ​ರಾ​ಗಿ​ದ್ದರು. ಗುರುವಾರ ನಡೆದ ಇಂಗ್ಲಿಷ್‌ ಪರೀಕ್ಷೆಯಲ್ಲಿ 13,635 ಮಂದಿ ವಿದ್ಯಾರ್ಥಿಗಳಲ್ಲಿ 762 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಜಿಲ್ಲೆಯಲ್ಲಿ 9 ವಿದ್ಯಾರ್ಥಿಗಳು ಕಂಟೆನ್ಮೆಂಟ್‌ ವಲಯದಿಂದ ಬಂದವರು, ನಿಯಮದಂತೆ ಅವರು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ.

ಮಾಹಿತಿ ಮುಚ್ಚಿಟ್ಟು ಸೋಂಕು ಹರಡಿದ ಸಹೋದರರು..!

ಅದೇ ರೀತಿ ಅನಾರೋಗ್ಯದಿಂದ ಬಳಲುತಿದ್ದ 4 ವಿದ್ಯಾರ್ಥಿಗಳಿಗೂ ಸುರಕ್ಷತೆಯ ದೃಷ್ಟಿಯಿಂದ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿತ್ತು. ಖಾಸಗಿ ವಾಹನ ಇಲ್ಲದ, ಅಗತ್ಯ ಇರುವ ವಿದ್ಯಾರ್ಥಿಗಳನ್ನು ಬಸ್ಸುಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆತರಲಾಯಿತು. ಎಲ್ಲ ಕೇಂದ್ರಗಳಲ್ಲಿ ಪರೀಕ್ಷೆ ಮೊದಲು ವಿದ್ಯಾರ್ಥಿಗಳನ್ನು ವ್ಯಕ್ತಿಗತ ಅಂತರದಲ್ಲಿ ಥರ್ಮಲ್‌ ಸ್ಕಾ್ಯನಿಂಗ್‌ ಮಾಡಲಾಯಿತು. ಪರೀಕ್ಷೆಗೆ ಮೊದಲು ಎಲ್ಲ 51 ಕೇಂದ್ರಗಳನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿತ್ತು.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC