ಕರ್ನಾಟಕಲ್ಲಿ ಮುಂದುವರಿದ ಕೊರೋನಾ ಆರ್ಭಟ/ ಒಟ್ಟು 3,70, 206 ಸೋಂಕಿತರು/ ಕಳೆದ 24 ಗಂಟೆ ಅವಧಿಯಲ್ಲಿ 104 ಮಂದಿ ಮಹಾಮಾರಿಗೆ ಬಲಿ/ ಬೆಂಗಳೂರಿನಲ್ಲಿ 3189 ಪ್ರಕರಣ
ಬೆಂಗಳೂರು (ಸೆ. 03) ಕೊರೋನಾ ಅಬ್ಬರ ಕೆಳಗೆ ಇಳಿಯುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಗುರುವಾರ ಕರ್ನಾಟಕದಲ್ಲಿ 8865 ಮಂದಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,70, 206ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಅಲ್ಲಿಗೆ ಕರ್ನಾಟಕದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6054. ಬೆಂಗಳೂರಿನಲ್ಲಿ 29 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 104 ಮಂದಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಮಹಿಳೆ ನಾಪತ್ತೆ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ 3189 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 8865 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದರ.
7122 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,68,035ಕ್ಕೆ ಏರಿಕೆಯಾಗಿದೆ. 96,098 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 735 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ 400ಕ್ಕೂ ಅಧಿಕ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಮತ್ತೊಂದು ಸುತ್ತಿನ ಅಲ್ ಲಾಕ್ ಗೆ ರಾಜ್ಯ ಸರ್ಕಾರ ಒಂದು ಕಡೆ ಸಿದ್ಧತೆ ಮಾಡಿಕೊಂಡಿದೆ. ಆದರೆ ಕೊರೋನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ.
ಇಂದಿನ 03/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ. https://t.co/GDJTfI9n5j pic.twitter.com/wu1lwkXDeR
— K'taka Health Dept (@DHFWKA)