ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್‌ಪೋಸ್ಟ್‌ನಲ್ಲಿ ಎಸಿಪಿ ಸಿದ್ದನಗೌಡ, ಮಾಳಮಾರುತಿ ಠಾಣೆ ಇನ್ಸ್‌ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ ತಪಾಸಣೆ ನಡೆಸಿದಾಗ ನಗದು ಪತ್ತೆ.
ಬೆಳಗಾವಿ(ಮಾ.22): ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 9 ಲಕ್ಷ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್‌ನಲ್ಲಿ ನಿನ್ನೆ(ಮಂಗಳವಾರ) ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್‌ಪೋಸ್ಟ್‌ನಲ್ಲಿ ಎಸಿಪಿ ಸಿದ್ದನಗೌಡ, ಮಾಳಮಾರುತಿ ಠಾಣೆ ಇನ್ಸ್‌ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ.
undefined
ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ: ಬಾಲಚಂದ್ರ ಜಾರಕಿಹೊಳಿ
ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್‌ಓಪಿಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ. ಈ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ನಿಯಮಾವಳಿ ಪ್ರಕಾರ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.