Bengaluru: ಪ್ರವಾಹ ತಡೆಯಲು 900 ಕೋಟಿ ವೆಚ್ಚದ ಹೊಸ ಪ್ಲಾನ್‌: ಸಿಎಂ ಬೊಮ್ಮಾಯಿ

By Kannadaprabha News  |  First Published Nov 25, 2021, 6:38 AM IST

*   ಹೊಸದಾಗಿ ರಾಜಕಾಲುವೆ, ನೀರುಗಾಲುವೆ ನಿರ್ಮಾಣಕ್ಕೆ 900 ಕೋಟಿ
*   ರಾಜಕಾಲುವೆಯಲ್ಲಿ ಮಳೆ ನೀರು ಉಕ್ಕಿ ಹರಿಯದಂತೆ ತಡೆ ನಿರ್ಮಾಣ
*   ತಗ್ಗು ಪ್ರದೇಶಕ್ಕೆ ನೀರು ನುಗ್ಗದಂತೆ ಪರಿಹಾರ
 


ಬೆಂಗಳೂರು(ನ.25):  ಮಳೆ(Rain) ನೀರು ಸರಾಗವಾಗಿ ಹರಿಯುವಂತೆ ಮಾಡಲು ರಾಜಕಾಲುವೆ ಅಗಲ ವಿಸ್ತರಿಸಿ, ಪುನರ್‌ ನಿರ್ಮಾಣಕ್ಕಾಗಿ ಸಮಗ್ರ ಯೋಜನಾ ವರದಿ (DPR) ಸಿದ್ಧಪಡಿಸುವಂತೆ ಬಿಬಿಎಂಪಿ ಅಧಿಕಾರಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಾಕೀತು ಮಾಡಿದ್ದು, ಈ ಯೋಜನೆಗಾಗಿ ರಾಜ್ಯ ಸರ್ಕಾರದಿಂದ(Government of Karnataka) 900 ಕೋಟಿ ಅನುದಾನ ಒದಗಿಸುವುದಾಗಿ ಪ್ರಕಟಿಸಿದ್ದಾರೆ.

ಬುಧವಾರ ಬಿಬಿಎಂಪಿ(BBMP) ಕೇಂದ್ರ ಕಚೇರಿಯಲ್ಲಿ ಸಚಿವ ಮತ್ತು ಪಾಲಿಕೆ ಎಂಜಿನಿಯರ್‌ಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ ಕಾಲುವೆಗಳಲ್ಲಿ ಮಳೆ ನೀರು ಉಕ್ಕಿ ಹರಿಯದಂತೆ ತಡೆಯುವ ಹಾಗೂ ತಗ್ಗು ಪ್ರದೇಶಗಳಿಗೆ ನೀರು(Water) ನುಗ್ಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ಹೊಸದಾಗಿ 51 ಕಿ.ಮೀ. ರಾಜಕಾಲುವೆ ಮತ್ತು 38 ಕಿ.ಮೀ. ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ನೀರುಗಾಲುವೆಗಳನ್ನು ನಿರ್ಮಿಸಲು ಯೋಜನೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದರು.

Tap to resize

Latest Videos

undefined

ವೃಷಭಾವತಿ ವ್ಯಾಲಿ, ಹೆಬ್ಬಾಳ ವ್ಯಾಲಿ, ಚಲ್ಲಘಟ್ಟ ಮತ್ತು ಕೋರಮಂಗಲ ಸೇರಿ ಒಟ್ಟು ನಾಲ್ಕು ವ್ಯಾಲಿಗಳಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 842 ರಾಜಕಾಲುವೆಗಳಿವೆ. ಅದರಲ್ಲಿ 415 ಕಿ.ಮೀ. ರಾಜಕಾಲುವೆ ಪೂರ್ಣಗೊಂಡಿದೆ. 2019-20ರಲ್ಲಿ 1060 ಕೋಟಿ ವೆಚ್ಚದಲ್ಲಿ 75 ಕಿ.ಮೀ. ರಾಜಕಾಲುವೆ ಕಾಮಗಾರಿಗೆ ಅನುಮತಿ ನೀಡಲಾಗಿತ್ತು. ಈಗಾಗಲೇ 40 ಕಿ.ಮೀ.ನಷ್ಟುಕಾಮಗಾರಿ ಪೂರ್ಣಗೊಂಡಿದ್ದು, ಜನವರಿ ಅಂತ್ಯದೊಳಗೆ 35 ಕಿ.ಮೀ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಹೇಳಿದರು.

Karnataka Rain| ಮನೆಗಳಿಗೆ ನೀರು ನುಗ್ಗಿದ್ದರೆ ತಕ್ಷಣ 10 ಸಾವಿರ ಪರಿಹಾರ

ನಗರದಲ್ಲಿ(Bengaluru)  ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿದೆ. ಕೆರೆ ಕೆಳಗೆ ಇರುವ ರಾಜಕಾಲುವೆಗಳನ್ನು ದುರಸ್ತಿ ಮಾಡಿ, ಅದರ ನೀರಿನ ಸಾಗಣೆ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎನ್ನುವ ವಿಚಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ನಗರದೊಳಗಿನ ರಾಜಕಾಲುವೆಗಳ ಕಲ್ಲಿನ ಕಟ್ಟಡಗಳನ್ನು ಆರ್‌ಸಿಸಿ ಕಟ್ಟಡಗಳಿಗೆ ಪರಿವರ್ತಿಸಬೇಕು. ಹೊರವಲಯದ ಗ್ರಾಮೀಣ ಪ್ರದೇಶಗಳಲ್ಲಿ ಮಣ್ಣಿನ ಕಾಲುವೆಗಳಿವೆ. 110 ಗ್ರಾಮಗಳಲ್ಲಿ ಆರ್‌ಸಿಸಿ ಕಾಲುವೆಗಳನ್ನು ನಿರ್ಮಿಸಿ, ಅವುಗಳ ಅಗಲ ವಿಸ್ತರಿಸಬೇಕು. ಅಲ್ಲಲ್ಲಿ ಇರುವ ಅಡಚಣೆಗಳನ್ನು ತೆಗೆಯಲು ವಿಶೇಷ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.

ಪಾಲಿಕೆ ವ್ಯಾಪ್ತಿಯಲ್ಲಿ ಹಲವು ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಸುಮಾರು 94 ಅತೀ ಸೂಕ್ಷ್ಮ ಸ್ಥಳಗಳಿವೆ. ಅವುಗಳನ್ನು ಇನ್ನು ಎರಡು ತಿಂಗಳೊಳಗೆ ದುರಸ್ತಿಗೊಳಿಸಲು ಸೂಚನೆ ನೀಡಲಾಗಿದೆ. ಚಲ್ಲಘಟ್ಟ ಮತ್ತು ವೃಷಭಾವತಿಯಲ್ಲಿಯೂ ಇಂತಹ ಸೂಕ್ಷ್ಮ ಸ್ಥಳಗಳಿವೆ ಎಂಬ ಮಾಹಿತಿಯನ್ನು ಪಡೆದಿದ್ದೇನೆ. ಅವುಗಳನ್ನು ಸರಿಪರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮುಂದಿನ ಮಳೆಗಾಲದಲ್ಲಿ(Rainy Season) ಈ ಭಾಗದ ಜನರಿಗೆ ತೊಂದರೆ ಆಗಬಾರದು ಎಂದು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಹಲವಾರು ಬಡಾವಣೆಗಳಲ್ಲಿ ಯುಜಿಡಿ ಲೈನ್‌ ಪೂರ್ಣಗೊಳ್ಳಬೇಕಿದ್ದು, ಅದನ್ನು ಪೂರ್ಣಗೊಳಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಿಗೆ ಸೂಚಿಸಲಾಗಿದೆ. ಶಾಶ್ವತ ಪರಿಹಾರ ನೀಡಬೇಕೆಂಬ ಉದ್ದೇಶದಿಂದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದಲ್ಲದೆ, ಬಡಾವಣೆ-ಓಣಿಯಲ್ಲಿರುವ ಒಳಚರಂಡಿಗಳಲ್ಲಿ ಹೂಳು ತೆಗೆಯಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ. ಪ್ರಾಥಮಿಕ ಚರಂಡಿಗಳಲ್ಲಿಯೂ ಹೂಳು ತೆಗೆಯಲು ಸೂಚಿಸಲಾಗಿದೆ ಎಂದರು.

ಒತ್ತುವರಿ ತೆರವು ವೇಳೆ ತೊಂದರೆ ಕೊಡಬೇಡಿ

Karnataka Rain: ಸಿಎಂಗೆ ಕರೆ, ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ವಿವರ ಪಡೆದ ಪ್ರಧಾನಿ ಮೋದಿ

2626 ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಗುರುತಿಸಿದ್ದು, ಅದರಲ್ಲಿ 1480 ತೆರವುಗೊಳಿಸಿದ್ದಾರೆ, ಇನ್ನು 714ಅನ್ನು ತೆರೆವುಗೊಳಿಸಲು ಕಾನೂನಾತ್ಮಕವಾಗಿ ಕ್ರಮ ಜರುಗಿಸುತ್ತೇವೆ. ಬಡವರಿಗೆ ತೊಂದರೆ ಕೊಡಬೇಡಿ. ಅವರಿಗೆ ಸ್ಥಳಾಂತರಕ್ಕೆ ಸಮಯ ನೀಡುವಂತೆ ಸೂಚಿಸಲಾಗಿದೆ. ದೊಡ್ಡ ಬಿಲ್ಡರ್‌ಗಳು(Builders) ಒತ್ತುವರಿ ಮಾಡಿದ್ದರೆ ಕೂಡಲೇ ಅದನ್ನು ತೆಗೆಯಲು ಸ್ಪಷ್ಟಆದೇಶ ನೀಡಲಾಗಿದೆ. 130 ಎಂಜಿನಿಯರ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಇಂದಿನ ಅಗತ್ಯಕ್ಕೆ ತಕ್ಕಂತೆ ಮಾಸ್ಟರ್‌ ಪ್ಲ್ಯಾನ್‌ ಮಾಡಿ

ಶಾಶ್ವತವಾಗಿ ದೊಡ್ಡ ಕೆರೆಗಳಿಂದ ನದಿಗಳಿಗೆ(River) ಸೇರುವವರೆಗೂ ನಾಲ್ಕು ವ್ಯಾಲಿಗಳಲ್ಲಿ ಉಳಿದಿರುವ ಕೆಲಸ ಮತ್ತು ಮಾಡಬೇಕಿರುವ ಕೆಲಸವನ್ನು ಮಾಸ್ಟರ್‌ ಪ್ಲಾನ್‌ ಮಾಡಲು ಆದೇಶಿಸಿದ್ದೇನೆ. ಹಿಂದೆ ಮಾಸ್ಟರ್‌ ಪ್ಲಾನ್‌(Master Plan) ಇರಬಹುದು. ಈಗ ನಗರ ಬೆಳೆದಿದ್ದು, ಬಡಾವಣೆಗಳು ಹೆಚ್ಚಾಗಿವೆ. ಹೀಗಾಗಿ ಇವತ್ತಿನ ಸ್ಥಿತಿಗತಿಗೆ ತಕ್ಕಂತೆ ಮಾಸ್ಟರ್‌ ಪ್ಲಾನ್‌ ಮಾಡಿ ಅದಕ್ಕೆ ಅನುಗುಣವಾಗಿ ಕೆಲಸ ಮಾಡಿ ಕಾಮಗಾರಿ ಮಾಡಿ ಶಾಶ್ವತ ಪರಿಹಾರ ನೀಡಬೇಕಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
 

click me!