Covid Crisis: ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವಿಟಿ ದರ ಮತ್ತೆ ಶೇ.5ಕ್ಕೆ ಏರಿಕೆ

By Govindaraj SFirst Published Jul 10, 2022, 8:49 AM IST
Highlights

ಬೆಂಗಳೂರಿನಲ್ಲಿ ಶನಿವಾರ 932 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.5ಕ್ಕೆ ಏರಿಕೆಯಾಗಿದೆ. 750 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ.

ಬೆಂಗಳೂರು (ಜು.10): ಬೆಂಗಳೂರಿನಲ್ಲಿ ಶನಿವಾರ 932 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.5ಕ್ಕೆ ಏರಿಕೆಯಾಗಿದೆ. 750 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 6,239 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 81 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

20,553 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 2505 ಮಂದಿ ಮೊದಲ ಡೋಸ್‌, 8746 ಮಂದಿ ಎರಡನೇ ಡೋಸ್‌ ಮತ್ತು 9302 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ಶನಿವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿಲ್ಲ. ನಗರದಲ್ಲಿ ಒಟ್ಟು 21 ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

3 ದಿನಗಳ ಬಳಿಕ ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: ಇಬ್ಬರು ಸೋಂಕಿತರು ಸಾವು

ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ: ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೊರಡಿಸಿದೆ. ನಗರ ವ್ಯಾಪ್ತಿಗೆ ಅನ್ವಯಿಸಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್‌ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್‌, ಪ್ರವೇಶ ಕುರಿತ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. 

ಸೋಂಕು ಕಂಡು ಬಂದರೆ ಶಾಲೆಗಳನ್ನು ಮುಚ್ಚುವ ಅಥವಾ ಅಪಾರ್ಟ್‌ಮೆಂಟ್‌ಗಳನ್ನು ಸೀಲ್‌ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ಶಾಲೆಗಳಲ್ಲಿ (12 ತರಗತಿವರೆಗೆ) ಸೋಂಕು ಲಕ್ಷಣ ಹೊಂದಿರುವ ಮಕ್ಕಳನ್ನು ಶಾಲೆಗೆ ಹಾಜರಾಗದಂತೆ ಸೂಚಿಸಬೇಕು. ಸೋಂಕು ಲಕ್ಷಣ ಹೊಂದಿರುವವರನ್ನು ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಟ್ಟಲ್ಲಿ ಅವರ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಹೋಂ ಐಸೋಲೇಷನ್‌, ಕೋವಿಡ್‌ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಬೇಕು. ವರದಿ ನೆಗೆಟಿವ್‌ ಬಂದಲ್ಲಿ ಆರ್‌ಟಿಪಿಸಿಆರ್‌ ಮಾದರಿ ಪರೀಕ್ಷೆ ವರದಿ ಬರುವವರೆಗೂ ನಿಗಾದಲ್ಲಿ ಇರಿಸಿ ನಂತರ ಕ್ರಮ ವಹಿಸಬೇಕು.

Covid Crisis: ಮಾಸ್ಕ್‌ ಧರಿಸದವರಿಗೆ ದಂಡ ಹಾಕಿ: ತಜ್ಞರು

ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟು, ಸಿ.ಟಿ.ವ್ಯಾಲ್ಯೂ 25 ಇದ್ದಲ್ಲಿ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ. ಕಾಲೇಜು ಮತ್ತು ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ, ಸೋಂಕು ದೃಢಪಟ್ಟರೆ ಕೋವಿಡ್‌ ನಿಯಮ ಪಾಲಿಸಬೇಕು. ಶಾಲಾ ಕಾಲೇಜುಗಳಲ್ಲಿ ಪ್ರಕರಣ ವರದಿಯಾದ ಕೊಠಡಿಗಳನ್ನು ಶೇ. ಸೋಡಿಯಂ ಹೈಪೋಕ್ಲೋರೈಟ್‌ ದ್ರಾವಣದಿಂದ ಸ್ಚಚ್ಛಗೊಳಿಸಬೇಕು ಮತ್ತು ಮರುದಿನ ಕೊಠಡಿ ಬಳಕೆ ಮಾಡಬೇಕು.

click me!