ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ನೀರು ಸೇವಿಸಿದ ಗ್ರಾಮದ ಪ್ರತಿ ಮನೆಯಲ್ಲಿ ಮೂರ್ನಾಲ್ಕು ಮಂದಿ ವಾಂತಿ-ಭೇದಿಯಿಂದ ನರಳುತ್ತಿದ್ದಾರೆ. 95ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಸಾರ್ವಜನಿಕ ಆಸ್ಪತ್ರೆ ಆನೆಹೊಸೂರು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲಿಂಗಸುಗೂರು(ಆ.11): ಚಿತ್ರದುರ್ಗದ ಕವಾಡಿಗರಹಟ್ಟಿ ದುರಂತದ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲೂ ಕಲುಷಿತ ನೀರು ಸೇವಿಸಿ ಸುಮಾರು 95ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ನೀರು ಸೇವಿಸಿದ ಗ್ರಾಮದ ಪ್ರತಿ ಮನೆಯಲ್ಲಿ ಮೂರ್ನಾಲ್ಕು ಮಂದಿ ವಾಂತಿ-ಭೇದಿಯಿಂದ ನರಳುತ್ತಿದ್ದಾರೆ. 95ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಸಾರ್ವಜನಿಕ ಆಸ್ಪತ್ರೆ ಆನೆಹೊಸೂರು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
undefined
ಬೇಡವೆಂದು ಬೇಡಿಕೊಂಡರೂ ಬಿಡದೇ ಹೆತ್ತ ಮಕ್ಕಳನ್ನೇ ಬಾವಿಗೆ ತಳ್ಳಿದ ತಾಯಿ, ತಾನೂ ಹಾರಿ ಸಾವು
ಈಗಾಗಲೇ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. ಈಗಾಗಲೇ 31 ಮಂದಿ ಗುಣಮುಖರಾಗಿದ್ದಾರೆ. ಇಷ್ಟಾದರೂ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಲೇ ಇದೆ. ಗ್ರಾಪಂ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಸ್ವಚ್ಛತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆ ಸರ್ವೆ ಕಾರ್ಯ ಆರಂಭಿಸಿದ್ದಾರೆ.