ಕುಮಾರಸ್ವಾಮಿ ಕುಟುಂಬದಿಂದ 97 ಎಕರೆ ಒತ್ತುವರಿ ಬಗ್ಗೆ ಹೈಕೋರ್ಟ್‌ಗೆ ದಾಖಲೆ ಸಲ್ಲಿಕೆ: ಸಚಿವ ಭೈರೇಗೌಡ

By Kannadaprabha News  |  First Published Aug 16, 2024, 6:48 AM IST

ಲ್ಯಾಂಡ್‌ಬಿಟ್ ಯೋಜನೆ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ. ಈ ಸಂಬಂಧ ಗ್ರಾಮವಾರು ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಾಜ್ಯದಲ್ಲಿ 4.32 ಲಕ್ಷ ಎಕರೆ ಸರ್ಕಾರಿ ಜಾಗ ಒತ್ತುವರಿಯಾಗಿರುವ ಶಂಕೆ ಇದ್ದು. ಇವುಗಳ ಸ್ಥಳಪರಿಶೀಲನೆಗೆ ಸೂಚಿಸಲಾಗಿದೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ 


ಬಳ್ಳಾರಿ(ಆ.16):  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಹೈಕೋರ್ಟ್‌ಗೆ ಸರ್ಕಾರದಿಂದ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಒದಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಸ್ವಾತಂತ್ರೋತ್ಸವ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಲ್ಯಾಂಡ್‌ಬಿಟ್ ಯೋಜನೆ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ. ಈ ಸಂಬಂಧ ಗ್ರಾಮವಾರು ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಾಜ್ಯದಲ್ಲಿ 4.32 ಲಕ್ಷ ಎಕರೆ ಸರ್ಕಾರಿ ಜಾಗ ಒತ್ತುವರಿಯಾಗಿರುವ ಶಂಕೆ ಇದ್ದು. ಇವುಗಳ ಸ್ಥಳಪರಿಶೀಲನೆಗೆ ಸೂಚಿಸಲಾಗಿದೆ. ಈಗಾಗಲೇ 13.04 ಲಕ್ಷ ಎಕರೆ ಜಮೀನುಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಪೈಕಿ 91 ಸಾವಿರ ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿರುವುದು 'ಲ್ಯಾಂಡ್ ಬೀಟ್' ಮೊಬೈಲ್ ತಂತ್ರಾಂಶದ ಮೂಲಕ ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಜಮೀನುಗಳನ್ನು ವ್ಯಾಪ್ತಿಗೆ ತರಲಾಗುವುದು. ಲ್ಯಾಂಟ್‌ಬೀಟ್ ಯೋಜನೆ ಅನುಷ್ಠಾನದಿಂದ ಸರ್ಕಾರಿ ಜಮೀನು ಒತ್ತುವರಿ ಯಾಗದಂತೆ ಶಾಶ್ವತವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

Tap to resize

Latest Videos

ಸಚಿವರಿಂದಲೇ ಬೆಂಗಳೂರಿನ ರಸ್ತೆ ಗುಂಡಿ ಬಗ್ಗೆ ತೀವ್ರ ಅಸಮಾಧಾನ..!

ರಾಜ್ಯದಲ್ಲಿ ಖಾಲಿ ಇರುವ 750 ಸರ್ವೇಯರ್ ನೇಮಕಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಎಡಿಎಲ್‌ಆರ್, ಸರ್ವೇಯರ್‌ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಸಚಿವರು, ರಾಜ್ಯಕ್ಕೆ ಅನುದಾನ ನೀಡುವಂತೆ ಕೋರಲು ದೆಹಲಿಗೆ ತೆರಳಿ ಕೇಂದ್ರ ನಾಯಕರಿಗೆ ಹೂವಿನಹಾರ, ಶಾಲು ಹಾಕಿ, ಟೋಪಿ ಇಟ್ಟು, ಕೈ ಮುಗಿದರೂ ಅವರ ಮನಸ್ಸು ಕರಗಲಿಲ್ಲ. ನಾವು ಕೊಟ್ಟ ಮನವಿಯನ್ನು ಕಸದ ಬುಟ್ಟಿಗೆ ಎಸೆದರು ಎಂದು ಆರೋಪಿಸಿದರು.

click me!