ಗರ್ಭಿಣಿಯರು, ಬಾಣಂತಿಯರಿಗೆ ವಿತರಿಸಿದ ಅಂಗನವಾಡಿ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ

By Kannadaprabha News  |  First Published Aug 12, 2024, 10:50 PM IST

ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. 
 


ಗುಡಿಬಂಡೆ (ಆ.12): ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ಈ ಪೊಟ್ಟಣಗಳನ್ನು ವಿತರಿಸಲಾಗಿತ್ತು. ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಬೆಲ್ಲದ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ.

ಅಂಗನವಾಡಿ ಜವಾಬ್ದಾರಿ ಅಲ್ಲ: ಬೆಲ್ಲದ ಮೂಟೆಗಳನ್ನು ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಎಂ.ಎಸ್.ಪಿ.ಸಿ ಯವರು ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಾರೆ. ನಾವು ಅವನ್ನು ವಿತರಿಸಿದ್ದೇವೆ ಅಷ್ಟೇ. ಪ್ಯಾಕೆಟ್ ಒಳಗೆ ಇಲಿ ಸತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಪ್ರತಿಕ್ರಿಯಿಸಿದ್ದಾರೆ.

Tap to resize

Latest Videos

ಉಂಗುರದ ನಂಟಿಗೆ 8 ವರ್ಷ: ನೂರು ಜನ್ಮದಲ್ಲೂ ನೀನೇ ನನ್ನ ಇನಿಯ ಎಂದ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಎಂ.ಎಸ್.ಪಿ.ಎಸ್ ಸಂಸ್ಥೆಯಲ್ಲಿ ತಯಾರಾಗುತ್ತಿವೆ. ತಯಾರಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ ಆಗಿದೆ. ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.

click me!