ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ. ಒಗ್ಗಾಟ್ಟಿನಿಂದ ಪಟ್ಟಣ ಮಾದರಿ ಅಭಿವೃದ್ಧಿ ಮಾಡಲು ಸಂಕಲ್ಪ ಮಾಡಿದ್ದೇನೆ ಎಂದು ಶಾಸಕಿ ಕರೆಮ್ಮ ನಾಯಕ ಹೇಳಿದರು.
ದೇವದುರ್ಗ (ಮಾ.8): ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ. ಒಗ್ಗಾಟ್ಟಿನಿಂದ ಪಟ್ಟಣ ಮಾದರಿ ಅಭಿವೃದ್ಧಿ ಮಾಡಲು ಸಂಕಲ್ಪ ಮಾಡಿದ್ದೇನೆ ಎಂದು ಶಾಸಕಿ ಕರೆಮ್ಮ ನಾಯಕ ಹೇಳಿದರು.
ಪಟ್ಟಣದ ಜಹೀರುದ್ಧನ್ ದರ್ಗಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪುರಸಭೆ ಎಸ್ಎಫ್‌ಸಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ನೆರವೇರಿಸಿ ಮಾತನಾಡಿದ ಅವರು, ರಾಜಕಾಲುವೆ, ಚರಂಡಿ, ಶೌಚಾಲಯ ಸೇರಿದಂತೆ ಇತರೆ ಅಭಿವೃದ್ಧಿಗಾಗಿ ಸಂಬಂಧಪಟ್ಟ ಸಚಿವರಿಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಕೋಟ್ಯಂತರ ರು. ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿವೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಮುನ್ನವೇ ಕೆಲ ವಾರ್ಡ್‌ಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತದೆ ಎಂದರು.
undefined
ಪುರಸಭೆ ಸದಸ್ಯರ ನಿಯೋಗ ಕರೆದೊಯ್ದು, ಸಂಬಂಧಪಟ್ಟ ಮಂತ್ರಿಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸೋಣ ಎಂದರು.
ಕೆಲಸ ಕಾರ್ಯಗಳ ನಿಮಿತ್ತ ಪಟ್ಟಣಕ್ಕೆ ಬರುವ ಜನರಿಗೆ ಸಾರ್ವಜನಿಕರ ಶೌಚಾಲಯ ವ್ಯವಸ್ಥೆ ಇಲ್ಲವಾಗಿತ್ತು. ಲಕ್ಷಾಂತರ ರು. ವೆಚ್ಚದಲ್ಲಿ ನಾಲ್ಕು ಕಡೆ ಶೌಚಾಲಯ ನಿರ್ಮಿಸಲು ಚಾಲನೆ ನೀಡಿದ್ದೇನೆ. ಹಂತ ಹಂತವಾಗಿ ಅಭಿವೃದ್ಧಿ ಮಾಡಲು ಪುರಸಭೆ ಸದಸ್ಯರು ಕೈಜೋಡಿಸಬೇಕು ಎಂದರು.
ಜನರ ತೆರಿಗೆಯ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ಕಾಮಗಾರಿ ಆಗದಂತೆ ಜನರೆ ನಿಗಾವಹಿಸಬೇಕು. ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು, ಸದಸ್ಯರು ಎಚ್ಚರವಹಿಸಬೇಕು. ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಮೂಲಕ ಜನರಿಗೆ ಸಮರ್ಪಕವಾಗಿ ನೀರು ಪೂರೈಸಬೇಕು ಎಂದು ಹೇಳಿದರು.
ದೇವದುರ್ಗ ಶಾಸಕಿಗೆ ನಿಂದನೆ, ಕೊಲೆ ಬೆದರಿಕೆ: ಮಾಜಿ ಶಾಸಕನ ಸಹೋದರ ಸೇರಿ 8 ಜನರ ವಿರುದ್ಧ ಕೇಸ್
ಜನರು ಕೊಟ್ಟಿರುವ ಅಧಿಕಾರ ಜನರಿಗಾಗಿಯೇ, ಹಗಲು ರಾತ್ರಿ ದುಡಿಯೋಣ. ರಾಜಕೀಯ ಬಿಟ್ಟು, ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡೋಣ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಶರಣಗೌಡ ಗೌರಂಪೇಟೆ, ಜೆಡಿಎಸ್ ತಾಲೂಕಾಧ್ಯಕ್ಷ ಬುಡ್ಡನಗೌಡ ಮಾತನಾಡಿದರು. ಇದೇ ಸಂದರ್ಭದಲ್ಲಿ ಜಹೀರುದ್ಧನ್ ದರ್ಗಾ ತಾತಾ, ಪುರಸಭೆ ಸದಸ್ಯರು, ಮುಖಂಡರು, ಸಾರ್ವಜನಿಕರು ಇದ್ದರು