ವಿಶೇಷ ಚೇತನ ಮಕ್ಕಳು ಸಮಾಜದಲ್ಲಿ ಇತರರಂತೆ ಬದುಕುವ ಅವಕಾಶವಿದ್ದು ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ ಬೆಳೆಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ತಿಪಟೂರು : ವಿಶೇಷ ಚೇತನ ಮಕ್ಕಳು ಸಮಾಜದಲ್ಲಿ ಇತರರಂತೆ ಬದುಕುವ ಅವಕಾಶವಿದ್ದು ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ ಬೆಳೆಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
undefined
ವಿಕಲಚೇತನ ಮಕ್ಕಳಿಗೂ ಪೂರಕ ವಾತಾವರಣ ಕಲ್ಪಿಸಬೇಕು. ಸರ್ಕಾರ ಇಂತಹ ವಿಶೇಷ ಚೇತನ ಮಕ್ಕಳಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದು ಅಧಿಕಾರಿಗಳು ಅದನ್ನು ಸಮರ್ಪಕವಾಗಿ ಅರ್ಹ ಮಕ್ಕಳಿಗೆ ತಲುಪಿಸುವ ಕೆಲಸ ಮಾಡಬೇಕು. ವಿಶೇಷ ಚೇತನ ಮಕ್ಕಳಿಗೆ ಪೋಷಕರು ಪ್ರೋತ್ಸಾಹ, ಪ್ರೇರಣೆ, ಆತ್ಮಸ್ಥೈರ್ಯ ತುಂಬುವ ಮೂಲಕ ಮಾನಸಿಕ ಕೊರತೆ ಬಾರದಂತೆ ನೋಡಿಕೊಳ್ಳಬೇಕು. ಸಮಾಜ ಅವರನ್ನು ಕಡೆಗಣಿಸದೆ ಎಲ್ಲರಂತೆ ಪ್ರೀತಿ, ವಿಶ್ವಾಸದಿಂದ ನೋಡಿಕೊಂಡಾಗ ಅವರಲ್ಲಿರುವ ಕಿನ್ನತೆ ದೂರವಾಗಲಿದೆ. ಪೋಷಕರು ಸರ್ಕಾರದ ಸೌಲಭ್ಯ ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ವಿಶೇಷ ಚೇತನ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪವನ್‌ಕುಮಾರ್, ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಬಿಇಒ ಚಂದ್ರಯ್ಯ, ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೆಚ್.ಈ. ರಮೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾ. ಅಧ್ಯಕ್ಷ ಜಿ.ಆರ್. ಜಯರಾಂ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನೇಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಗಂಗಾಧರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ದಕ್ಷಿಣಮೂರ್ತಿ ತಾಲೂಕಿನ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ವಿಶೇಷ ಚೇತನ ಮಕ್ಕಳು ಭಾಗವಹಿಸಿದ್ದರು.
ನಿಮ್ಮ ಬೇಡಿಕೆ ಈಡೇರಿಸಿಕೊಳ್ಳುವೆ
ಬೆಳಗಾವಿ (ನ.29): ವಿಶೇಷ ಚೇತನ ಮಕ್ಕಳೆಂದರೇ ದೇವರ ಮಕ್ಕಳು, ಕರುಣಾಮಯಿಗಳು, ನಿಮ್ಮ ಉಜ್ವಲ ಭವಿಷ್ಯಕ್ಕೆ ಸರ್ಕಾರ ಕಂಕಣಬದ್ಧವಾಗಿ ನಿಲ್ಲುತ್ತದೆ. ತಾಯಿಯ ಸ್ಥಾನದಲ್ಲಿ ನಿಂತು ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ವಿಕಲಚೇತನರ ಕ್ರೀಡಾಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರು ಯಾವುದೇ ವಿಷಯದಲ್ಲಿ ಹಿಂದೆ ಉಳಿಯಬಾರದೆಂದು ಇಲಾಖೆ ನಿರಂತರವಾಗಿ ನಿಮ್ಮ ಜತೆ ನಿಂತು ಕೆಲಸ ಮಾಡುತ್ತಿದೆ. ಇಲಾಖೆಯಿಂದ ಎಲ್ಲ ಸೌಲಭ್ಯವನ್ನು ಒದಗಿಸಲಾಗುವುದು.
ನಿಮಗೆ ಸಂಬಂಧಿಸಿದ ಯಾವುದೇ ಪ್ರಸ್ತಾವನೆಗಳು 24 ಗಂಟೆಗಳಲ್ಲಿ ಕ್ಲಿಯರ್ ಆಗಬೇಕೆಂದು ಸೂಚನೆಯನ್ನು ನೀಡಿದ್ದೇನೆ. ಈ ವಿಶೇಷ ಮಕ್ಕಳ ಭವಿಷ್ಯದ ಸಲುವಾಗಿ ಕೆಲಸ ಮಾಡುತ್ತಿರುವ ಎಲ್ಲ ಶಿಕ್ಷಕರಿಗೂ ಸಹ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಯುವಸಬಲೀಕರ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ, ವಿಕಲಚೇತನರ ಇಲಾಖೆಯ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಯುವರಾಜ ಕದಂ, ಶಂಕರಗೌಡ ಪಾಟೀಲ, ವಿಶೇಷ ಚೇತನ ಶಾಲೆಗಳ ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಯೋಜನೆಗೆ ಸಿದ್ದರಾಮಯ್ಯ ತಡೆ: ಶೋಭಾ ಕರಂದ್ಲಾಜೆ ಕಿಡಿ
ಬಸವಣ್ಣನವರ ಸಮಾನತೆಯ ಕನಸು ನನಸು ಮಾಡೋಣ: ವಿಶ್ವಗುರು ಬಸವಣ್ಣ 12ನೇ ಶತಮಾನದಲ್ಲಿ ಕಂಡ ಸಮಾನತೆಯ ಕನಸನ್ನು ನನಸು ಮಾಡಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಸಮೀಪದ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಬಸವ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಶ್ವಗುರು ಬಸವ ಮಂಟಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಜಾತೀಯತೆ ಹೋಗಲಾಡಿಸಿ, ಮಹಿಳಾ ಸಮಾನತೆ ಸಾಧಿಸುವ ಮೂಲಕ ಸಮಾಜದಲ್ಲಿ ಮೇಲು ಕೀಳೆಂಬ ಭಾವನೆ ಹೋಗಾಲಾಡಿಸಬೇಕೆಂದು ಬಸವಣ್ಣನವರು ಕನಸು ಕಂಡಿದ್ದರು.