ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಯವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು.
ಉಡುಪಿ (ಡಿ.18): ಸದ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ ಎಂದು ಹಿಂದೂ ಜನಜಾಗೃತಿ ಸಮಿತಿ ಆರೋಪಿಸಿದೆ.
ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಯವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು.
undefined
ರಾಜ್ಯದಲ್ಲಿಯೂ ಲವ್ ಜಿಹಾದ್ ಹೆಚ್ಚಳ: ಹಿಂದೂ ಜನಜಾಗೃತಿ ಸಮಿತಿಯ ವಿಜಯ ಕುಮಾರ್ ಇವರು ಮಾತನಾಡಿ, ದೆಹಲಿಯ ಜಿಹಾದಿ ಅಫ್ತಾಬ್ ಹಿಂದೂ ಯುವತಿ ಶ್ರದ್ಧಾ ವಾಲ್ಕರ್‌ಳನ್ನು ಲವ್ ಜಿಹಾದ್ ಪ್ರಕರಣದಲ್ಲಿ 35 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಿಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ಕರ್ನಾಟಕದಲ್ಲೂ ಸಹ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿದೆ. ಮಾರ್ಚ್ 2022 ರಂದು ಗದಗದಲ್ಲಿ ಅಪೂರ್ವ ಎಂಬ ಯುವತಿಯನ್ನು ಮಹಮ್ಮದ್ ಇಜಾಜ್‌ನು ಇಸ್ಲಾಮ್‌ಗೆ ಮತಾಂತರ ಮಾಡಿ, ಆಕೆಯ ಮೇಲೆ 25 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದನು ಎಂದು ಹೇಳಿದರು.
ಲವ್ ಜಿಹಾದ್ ಬಗ್ಗೆ ಎಷ್ಟೇ ಹೇಳಿದ್ರೂ ಕಾಂಗ್ರೆಸ್ ತಲೆಕೆಡಿಸಿಕೊಂಡಿಲ್ಲ: ಸಚಿವ ಆರ್.ಅಶೋಕ್
ದೀಪ್ತಿ ಮರ್ಲಾ ಮತಾಂತರ: ಮಂಗಳೂರಿನಲ್ಲಿ ದೀಪ್ತಿ ಮರ್ಲಾ ಎನ್ನುವ ಕೊಡಗಿನ ದಂತ ವೈದ್ಯಕೀಯ ವಿಧ್ಯಾರ್ಥಿನಿಯನ್ನು ಅಬ್ದುಲ್ ರೆಹಮಾನನು ಮದುವೆಯಾಗಿ ಆಕೆಯನ್ನು ಇಸ್ಲಾಮ್‌ಗೆ ಮತಾಂತರ ಮಾಡಿ, ಆಕೆಯನ್ನು ಐಸಿಸ್ ಭಯೋತ್ಪಾಧನಾ ಚಟುವಟಿಕೆಯಲ್ಲಿ ತೊಡಗಿಸಿದಾಗ ಆಕೆಯನ್ನು ರಾಷ್ಟ್ರೀಯ ತನಿಖಾ ದಳವು ಬಂಧಿಸಿದೆ. ಅಕ್ಟೋಬರ್ 2022 ರಂದು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಶಿವಮೊಗ್ಗದಲ್ಲಿ ಶಾಹಿನ್ ಗ್ಯಾಂಗ್ ಎನ್ನುವ ಮುಸ್ಲಿಂ ಯುವತಿಯರ ಗುಂಪು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಡಿಯಲ್ಲಿ ತರಬೇತಿ ಪಡೆದು ಕಾಲೇಜುಗಳಲ್ಲಿ ಹಿಂದೂ ಯುವತಿಯರನ್ನು ಮುಸಲ್ಮಾನ್ ಯುವಕರಿಗೆ ಪರಿಚಯಿಸಿ ಲವ್ ಜಿಹಾದ್‌ನಲ್ಲಿ ಸಿಲುಕಿಸಿ ಅವರನ್ನು ಇಸ್ಲಾಂಗೆ ಮತಾಂತರ ಮಾಡುವ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖಾ ವರದಿಯಲ್ಲಿ ತಿಳಿಸಿದೆ.
Bengaluru: 'ಲವ್ ಜಿಹಾದ್ ವಿರೋಧಿ ಪೊಲೀಸ್ ದಳ' ಸ್ಥಾಪನೆಗೆ ಸರ್ಕಾರಕ್ಕೆ ಮನವಿ
21 ಸಾವಿರ ಯುವತಿಯರ ನಾಪತ್ತೆ: ಕರ್ನಾಟಕದಲ್ಲಿ 2014 ರಿಂದ 2019 ರ ವರೆಗೆ 21 ಸಾವಿರ ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ 'ಲವ್ ಜಿಹಾದ್' ಇದೆಯೇ ಎಂದು ತನಿಖೆ ಮಾಡಬೇಕು. ಇದಕ್ಕಾಗಿ ಗೃಹ ಕಚೇರಿಯು ಸ್ವತಂತ್ರ ತನಿಖಾ ತಂಡವನ್ನು ನೇಮಿಸಬೇಕು. 'ಲವ್ ಜಿಹಾದ್' ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ 'ಲವ್ ಜಿಹಾದ್' ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕು ಎಂದು ಈ ಮೂಲಕ ಒತ್ತಾಯಿಸಿದರು.