ಶಿವಮೊಗ್ಗ ಡಿಸಿ ಕಚೇರಿ ಎದುರು ನಿಂತು ಅಜಾನ್‌ ಕೂಗಿದ ಯುವಕ: ವಿಡಿಯೋ ವೈರಲ್‌

By Kannadaprabha News  |  First Published Mar 20, 2023, 11:34 AM IST

ಅಜಾನ್‌ ಕುರಿತು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಶ್ವರಪ್ಪನವರು ಅಜಾನ್‌ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರು ನಿಂತು ಯುವಕನೊಬ್ಬ ಅಜಾನ್‌ ಕೂಗಿರುವ ವಿಡಿಯೋ ಈಗ ವೈರಲ್‌ ಆಗಿದೆ.


ಶಿವಮೊಗ್ಗ (ಮಾ.20) : ಅಜಾನ್‌ ಕುರಿತು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಶ್ವರಪ್ಪನವರು ಅಜಾನ್‌ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರು ನಿಂತು ಯುವಕನೊಬ್ಬ ಅಜಾನ್‌ ಕೂಗಿರುವ ವಿಡಿಯೋ ಈಗ ವೈರಲ್‌ ಆಗಿದೆ.

ಅಜಾನ್‌(Azan) ಕುರಿತು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ(KS Eshwarappa) ಅವರ ಹೇಳಿಕೆ ಖಂಡಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಶುಕ್ರವಾರ ಮುಸ್ಲಿಂ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಯುವಕನೊಬ್ಬ ಉದ್ದಟತನ ಪ್ರದರ್ಶನ ಮಾಡಿದ್ದು, ಜಿಲ್ಲಾಧಿಕಾರಿ ಕಚೇರಿ ಮೇಲೇರಿ ಅಜಾನ್‌ ಕೂಗಿದ್ದಾನೆ. ಈ ದೃಶ್ಯವನ್ನು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೋ ಫುಲ್‌ ವæೖರಲ್‌ ಆಗಿದೆ.

Tap to resize

Latest Videos

ಶಿವಮೊಗ್ಗದಲ್ಲಿ ಮತ್ತೆ 'ಧರ್ಮ ದಂಗಲ್ ', ವಿಎಚ್‌ಪಿಯಿಂದ ಇಂದು ಭಜನಾ ಪ್ರತಿಭಟನೆ

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಅಜಾನ್‌ ಕೂಗದಂತೆ ಪೊಲೀಸರ ತಾಕೀತು ಮಾಡಿದ್ದಾರೆ. ಇದರ ನಡುವೆಯೇ ಯುವಕ ಅಜಾನ್‌ ಕೂಗಿದ್ದಾನೆ.

ಅಜಾನ್‌ ಕೂಗಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಜಯನಗರ ಠಾಣೆ ಪೊಲೀಸರು, ಮುನ್ನಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಶಾಂತಿಭಂಗದ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಅಜಾನ್‌ ಕೂಗಿದ ವ್ಯಕ್ತಿಯನ್ನು ಪೊಲೀಸ್‌ ಠಾಣೆಗೆ ಕರೆಸಿ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಈ ಘಟನೆ ನಡೆದ ಸಮಯದಲ್ಲಿ ಹಾಜರಿದ್ದ ವ್ಯಕ್ತಿಗಳ ಪೂರ್ವಪರದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಮಾಹಿತಿ ಆಧಾರದ ಮೇಲೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದೇಶದ್ರೋಹಿ SDPI_PFI ಜತೆ ಕಾಂಗ್ರೆಸ್ ನಂಟಿದೆ: ಕೆಎಸ್ ಈಶ್ವರಪ್ಪ ಆರೋಪ

click me!